ಸಿದ್ದರಾಮಯ್ಯ ಸಣ್ಣ ಸಣ್ಣ ಇಲಿಗಳನ್ನು ಹೊಡೆಯುತ್ತಿದ್ರೆ, ಡಿಕೆಶಿ ದೊಡ್ಡ ದೊಡ್ಡ ಹುಲಿಗಳನ್ನು ಹೊಡೆಯುತ್ತಿದ್ದಾರೆ : ಆರ್.ಅಶೋಕ್ ಲೇವಡಿ

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬಣಗಳ ನಡುವೆ ಆಂತರಿಕ ಸಂಘರ್ಷ ತೀವ್ರಗೊಂಡಿದೆ. ಸಿದ್ದರಾಮಯ್ಯ ಸಣ್ಣ ಸಣ್ಣ ಇಲಿಗಳನ್ನು ಹೊಡೆಯುತ್ತಿದ್ದರೆ, ಡಿಕೆ ಶಿವಕುಮಾರ್ ದೊಡ್ಡ ದೊಡ್ಡ ಹುಲಿಗಳನ್ನು ಹೊಡೆಯುತ್ತಿದ್ದಾರೆ ಎಂದು ವಿಪಕ್ಷನಾಯಕ ಅರ್‌.ಅಶೊಕ್ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್‌ನಿಂದ ತೆಗೆದುಹಾಕಲ್ಪಟ್ಟ ರಾಜಣ್ಣ, ನಾಗೇಂದ್ರ, ಮತ್ತು ಜಮೀರ್‌ರಂತಹ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಪಕ್ಷದಿಂದ ದೂರ ಮಾಡಲಾಗುತ್ತಿದೆ. ದಾವಣಗೆರೆಯ ಜಬ್ಬಾರ್ ಮತ್ತು ಸಿಎಂ ಕಾರ್ಯದರ್ಶಿಯಾಗಿದ್ದ ನಜೀರ್‌ರನ್ನು ಸಹ ಗೇಟ್ ಪಾಸ್ ನೀಡಿ ಹೊರಹಾಕಲಾಗಿದೆ. ಸಿದ್ದರಾಮಯ್ಯ ಬೆಂಬಲಿಗರಿಗೆ ಕಾಂಗ್ರೆಸ್‌ನಲ್ಲಿ ಉಳಿಗಾಲವಿಲ್ಲ. ಒಟ್ಟಾರೆ ಕಾಂಗ್ರೆಸ್ ಪಕ್ಷವು ನಾಯಕತ್ವವಿಲ್ಲದೆ ಬೀದಿ ಭಿಕಾರಿಯಾಗಿದೆ ಎಂದು ಅವರು ಟೀಕೆ ಮಾಡಿದ್ರು.

ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ. ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ರಾಜ್ಯದ ಜನರಿಗೆ ಇನ್ನೂ ದೊಡ್ಡ ಮಾರಿಹಬ್ಬ ಕಾದಿದೆ ಎಂದು ಲೇವಡಿ ಮಾಡಿದ್ರು.

Leave a Reply

Your email address will not be published. Required fields are marked *