Tuesday, March 28, 2023
spot_img
- Advertisement -spot_img

108 ಆಂಬ್ಯುಲೆನ್ಸ್ ಸೇವೆಯಲ್ಲಿ ಸಮಸ್ಯೆ: ರಾಜ್ಯದ ಜನರು ಆತಂಕಕ್ಕೊಳಗಾಗದಿರಿ: ಸಚಿವ ಸುಧಾಕರ್

ಬೆಂಗಳೂರು : 108 ಆಂಬ್ಯುಲೆನ್ಸ್ ಸೇವೆಗಳ ಸಹಾಯವಾಣಿಯಲ್ಲಿ ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಸಮರೋಪಾದಿಯಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ರಾಜ್ಯದ ಜನರು ಈ ಕುರಿತು ಯಾವುದೇ ಆತಂಕಕ್ಕೆ ಒಳಗಾಗಬಾರದು, ತಾಂತ್ರಿಕ ಸಮಸ್ಯೆಯಿಂದ ಶನಿವಾರದಿಂದ ಈವರೆಗೆ ಈ ಪ್ರಕ್ರಿಯೆಗೆ 6 ರಿಂದ 7 ನಿಮಿಷಗಳ ಕಾಲ ತೆಗೆದುಕೊಳ್ಳಲಾಗುತ್ತಿದೆ. ಪ್ರತಿದಿನ 7 ರಿಂದ 8 ಸಾವಿರ ಕರೆಗಳ ಬದಲು 2 ರಿಂದ 2.5 ಸಾವಿರ ಕರೆಗಳನ್ನು ಮಾತ್ರ ಸ್ವೀಕರಿಸಲು ಸಾಧ್ಯವಾಗುತ್ತಿದೆ ಎಂದು ವಿವರಿಸಿದ್ದಾರೆ. ಆಂಬ್ಯುಲೆನ್ಸ್‌ಗಾಗಿ ಸಂಪರ್ಕಿಸುವ 108 ಐಟಿ ಹಾರ್ಡ್‌ವೇರ್‌ನಲ್ಲಿ ಶನಿವಾರ ಸಂಜೆಯಿಂದ ಸಮಸ್ಯೆ ಸೃಷ್ಟಿಯಾಗಿದೆ. ಅದನ್ನು ಗುತ್ತಿಗೆ ಪಡೆದುಕೊಂಡಿರುವ ಜಿವಿಕೆ ತುರ್ತು ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆ ಶೀಘ್ರದಲ್ಲೇ ಬಗೆಹರಿಸಲಿದೆ. ಆಂಬ್ಯುಲೆನ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಗಳಿಗೂ ಕರೆ ಬಂದರೆ ಸ್ವೀಕರಿಸಿ ಅಗತ್ಯ ಸೇವೆಗಳನ್ನು ಮಾಡಬೇಕೆಂದು ಸೂಚಿಸಲಾಗಿದೆ. ಮ್ಯಾನ್ಯುವಲ್ ಐಡಿಗಳನ್ನು ಕ್ರಿಯೇಟ್ ಮಾಡಿ ಆ ಮೂಲಕವೂ ಜನರಿಗೆ ತುರ್ತು ಸೇವೆ ಒದಗಿಸಲು ಸೂಚನೆ ನೀಡಲಾಗಿದೆ.

ಸ್ವಯಂಚಾಲಿತ ಕಾಲ್ ಸೆಂಟರ್ ವ್ಯವಸ್ಥೆ ಮೂಲಕ ಕರೆಗಳ ವಿತರಣೆಗೆ ಪರ್ಯಾಯವಾಗಿ ಮ್ಯಾನುವಲ್ ಐಡಿಗಳನ್ನು ಸೃಷ್ಟಿಸಿ ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗುತ್ತಿದೆ. ಇದರೊಂದಿಗೆ 104 ಕಾಲ್ ಸೆಂಟರ್ ನಲ್ಲಿ 108 ಆಂಬ್ಯುಲೆನ್ಸ್ ಸೇವೆಗೆ ಓವರ್ ಫ್ಲೋ ಕಾಲ್ ಸೆಂಟರ್ ಸ್ಥಾಪಿಸಲು ಸಹ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. 104 ಸಹಾಯವಾಣಿಯನ್ನು ಕೂಡ ಬಳಸಿಕೊಂಡು 108 ಸಹಾಯವಾಣಿ ಮೇಲಿನ ಒತ್ತಡ ಕಡಿಮೆ ಮಾಡಲಾಗುತ್ತಿದೆ. ಮಿಸ್ಡ್ ಕಾಲ್‌ಗಳನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದ್ದು, 108 ಸಹಾಯವಾಣಿಯಲ್ಲಿರುವ ಏಜೆಂಟ್‌ಗಳ ಸಂಖ್ಯೆಯನ್ನು ಕೂಡ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದರು.

Related Articles

- Advertisement -

Latest Articles