ಬೆಂಗಳೂರು : ಕಳೆದ ನಾಲ್ಕು ದಿನಗಳಲ್ಲಿ 75ಕ್ಕೂ ಹೆಚ್ಚು ಜನರು ಮಳೆಯಿಂದಾಗಿ ಬಲಿಯಾಗಿ, ಅಪಾರ ಪ್ರಮಾಣದ ಭೂಕುಸಿತ ಹಾಗೂ ಮೇಘಸ್ಫೋಟದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ನೈಸರ್ಗಿಕ ರಾಜ್ಯ ಸರ್ಕಾರ ನೆರವಿಗೆ ಮುಂದಾಗಿದೆ.
ಈ ಕುರಿತು ಟ್ವೀಟ್ ಮೂಲಕ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೈಸರ್ಗಿಕ ವಿಕೋಪದಿಂದಾಗಿ ಸಂಕಷ್ಟ ಎದುರಿಸುತ್ತಿರುವ ಹಿಮಾಚಲ ಪ್ರದೇಶಕ್ಕೆ 15 ಕೋಟಿ ರೂ. ಗಳ ಆರ್ಥಿಕ ನೆರವು ನೀಡಲು ಆದೇಶಿಸಿದ್ದಾರೆ.
ಇದನ್ನೂ ಓದಿ : ತಮಿಳುನಾಡಿಗೆ ಹೆಚ್ಚಿನ ನೀರು ಬಿಟ್ಟಿಲ್ಲ: ಡಿಕೆಶಿ
ಮುಖ್ಯಮಂತ್ರಿಗಳ ಆದೇಶದ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರುವ ಹಣವನ್ನು ಅವರ ಕಾರ್ಯದರ್ಶಿ ಎನ್ ಜಯರಾಮ್ ಅವರು ಹಿಮಾಚಲ ಪ್ರದೇಶ ಸರ್ಕಾರದ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.