ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ.ಏಳನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಕೊನೆಗೂ ಈಡೇರಿದೆ.
ಸರಕಾರಿ ನೌಕರರಿಗೆ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳಕ್ಕೆ ಸರಕಾರದ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರ ಹಾಕಿದೆ. ಸರ್ಕಾರದ ಭರವಸೆ ಬಳಿಕ ಮುಷ್ಕರಕ್ಕೆ ಬ್ರೇಕ್ ಹಾಕಿದ್ದು, ಕರ್ತವ್ಯಕ್ಕೆ ಹಾಜರಾಗುವಂತೆ ಅಧ್ಯಕ್ಷ ಷಡಕ್ಷರಿ ಘೋಷಿಸಿದ್ದಾರೆ. ಶೇ 17 ರಷ್ಟು ವೇತನ ಆದೇಶಕ್ಕೆ ಸಮ್ಮತಿ ನೀಡಿದ್ದರಿಂದ ಮುಷ್ಕರಕ್ಕೆ ಬ್ರೇಕ್ ಹಾಕಲಾಗಿದೆ.
ಎಪ್ರಿಲ್ 1, 2023 ರಿಂದ ಈ ಆದೇಶ ಜಾರಿ ಆಗಲಿದೆ ಎಂದು ಸರಕಾರ ಘೋಷಿಸಿದೆ. ಸಿಎಂ ಸೂಚನೆ ಮೇರೆಗೆ ಈ ಅಧಿಕೃತ ಆದೇಶ ಹೊರ ಬಿದ್ದಿದೆ. ಸರಕಾರದ ಭರವಸೆಯ ಮಾತಿಗೆ ನಾವು ಒಪ್ಪಿಗೆ ಸೂಚಿಸುವುದಿಲ್ಲ.
ಕೇವಲ ಬಾಯಿ ಮಾತಿನ ಭರವಸೆ ನಮಗೆ ಬೇಡ. ಅಲ್ಲಿಯವರೆಗೆ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ. ಆರ್ಥಿಕ ಇಲಾಖೆ ಅಧಿಕಾರಿಗಳು ಸಭೆಗೆ ಕರೆದಿದ್ದು, ಸಭೆ ಬಳಿಕ ಮುಂದಿನ ನಿರ್ಧಾರದ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ನೌಕರರು ಪ್ರತಿಭಟನೆ ಕೈ ಬಿಟ್ಟಿದ್ಧಾರೆ.
ಇನ್ನೂ ಇದೇ ವಿಚಾರವಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬಜೆಟ್ ದಿನವೇ ಸಿಎಂ ಘೋಷಣೆ ಮಾಡಬೇಕಿತ್ತು, ನೌಕರರಿಗೆ ನಂಬಿಕೆ ಇಲ್ಲ ಎಂದಿದ್ದಾರೆ.