ಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಮೇ 15ರ ಒಳಗೆ ಹೈಕಮಾಂಡ್‌ ಗಿಫ್ಟ್‌ ನೀಡಲಿದ್ದಾರೆ ಡಿಕೆ ಬಣದ ಶಾಸಕರು ಹೇಳುತ್ತಿದ್ದಾರೆಂದು ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆಂಬಲಿಗ ಶಾಸಕರು ಮುಂದೆ ಕರ್ನಾಟಕದಲ್ಲಿ ದಲಿತರು ಮುಖ್ಯಮಂತ್ರಿಯಾಗಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಅಧಿಕಾರ ಮುಂದುವರಿಸಲು ಅಥವಾ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಇನ್ನೂ ಮುಂದಿನ ಸಿಎಂ ದಲಿತ ಮುಖಂಡರಾಗಿರಬೇಕೆಂಬುದು ನಮ್ಮ ಪ್ರಬಲ ಒತ್ತಾಯವಾಗಿದೆ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದರು.

ಅಧಿಕಾರ ಮುಂದುವರಿಸಲು ಅಥವಾ ಪದತ್ಯಾಗ ಮಾಡಲು ಅವರು ಮಾನಸಿಕವಾಗಿ ಸಿದ್ಧರಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಮುಂದಿನ ಬಾರಿ ದಲಿತ ಸಮುದಾಯದ ನಾಯಕರು ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ ಬೇಡಿಕೆ. ಈ ವಿಚಾರವನ್ನು ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಇದರೊಂದಿಗೆ ಸಚಿವ ಸಂಪುಟ ಪುನಾರಚನೆಯೂ ಆಗಬೇಕಿದೆ ಎಂದು ಹೇಳಿದರು.

ಹೊಸಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಆಡಳಿತದಲ್ಲಿ ಹೊಸ ಬದಲಾವಣೆ ತರಬೇಕಿದೆ ಎಂದು ರಾಜಣ್ಣ ಅಭಿಪ್ರಾಯಪಟ್ಟರು

Leave a Reply

Your email address will not be published. Required fields are marked *