ಬೆಂಗಳೂರು: ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ರಾಜ್ಯಪಾಲರಿಗೆ ಬರೆದಿರುವ ನಕಲಿ ಪತ್ರಕ್ಕೆ ಸಂಬಂಧಿಸಿದಂತೆ ಸಿಐಡಿ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಬಂಧಿಸಿದೆ.
ಮೈಸೂರು ಕೃಷಿ ಇಲಾಖೆಯ 8 ಸಹಾಯಕ ನಿರ್ದೇಶಕರ ಹೆಸರಿನಲ್ಲಿ ಕರ್ನಾಟಕ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆಯಲಾಗಿತ್ತು. ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಪೋಸ್ಟಿಂಗ್‌ಗಾಗಿ ಅಧಿಕಾರಿಗಳಿಂದ 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿತ್ತು.
ಇದನ್ನೂ ಓದಿ: ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗಲ್ಲ : ಡಿಕೆಶಿ
ಈ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯಪಾಲರು, ಈ ಬಗ್ಗೆ ಪರಿಶೀಲಿಸುವಂತೆ ಕರ್ನಾಟಕದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸೂಚಿಸಿದ್ದರು.
‘ಸಚಿವರು ಅಧಿಕಾರಿಗಳಿಂದ 6-8 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಮಂಡ್ಯ ಜಿಲ್ಲೆಯ ವಿವಿಧ ತಾಲೂಕುಗಳ ಜಂಟಿ ಕೃಷಿ ನಿರ್ದೇಶಕರು ನನಗೆ ಪತ್ರ ಬರೆದಿದ್ದಾರೆ. ಇಂತಹ ಭ್ರಷ್ಟಾಚಾರ ತಡೆಯದಿದ್ದರೆ ವಿಷ ಸೇವಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕೂಡಲೇ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಿ’ ಎಂದು ಮುಖ್ಯಕಾರ್ಯದರ್ಶಿಗೆ ರಾಜ್ಯಪಾಲರು ಪತ್ರದ ಮೂಲಕ ತಿಳಿಸಿದ್ದರು.
ಇದನ್ನೂ ಓದಿ:ಸಿಎಂ ಭೇಟಿಯಾದ ಎಸ್.ಟಿ.ಸೋಮಶೇಖರ್; ಕಾಂಗ್ರೆಸ್ ಸೇರೋ ವಿಚಾರಕ್ಕೆ ಮತ್ತೆ ರೆಕ್ಕೆ-ಪುಕ್ಕ
ಬಳಿಕ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಆಗಸ್ಟ್ 8 ರಂದು ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿತ್ತು. ಈ ಸಂಬಂಧ ಕೃಷಿ ಇಲಾಖೆಯ 8 ಅಧಿಕಾರಿಗಳ ಹೆಸರಿನಲ್ಲಿ ಪತ್ರ ಬರೆದು ಸಹಿ ಮಾಡಿದ ಆರೋಪದ ಮೇಲೆ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ಬಂಧಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.