Wednesday, November 29, 2023
spot_img
- Advertisement -spot_img

ಪ್ರತಿಭಟನಾಕಾರರಿಂದ ರೈಲು ನಿಲ್ದಾಣ ಮುತ್ತಿಗೆಗೆ ಯತ್ನ: 20 ಮಂದಿ ವಶಕ್ಕೆ!

ಯಾದಗಿರಿ: ಕರ್ನಾಟಕ ಬಂದ್ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿವೆ. ಈ ನಡುವೆ ಕರವೇ ಕಾರ್ಯಕರ್ತರು ರೈಲು ನಿಲ್ದಾಣ ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ನಾಗರಕೊಯಿಲ್ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ತಡೆದ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ. 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನ ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ಶೆಟ್ಟಿ ಬಣದ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಬಿ ಗದ್ದುಗೆ ನೇತೃತ್ವದಲ್ಲಿ ಮುತ್ತಿಗೆಗೆ ಯತ್ನಿಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಬಂದ್ ಮಾಡಿದ್ದ ಕುರುಬೂರು ನಿಯೋಗದಿಂದ ಸಿಎಂ ಭೇಟಿ

ಮಹದಾಯಿ ಹೋರಾಟಗಾರರ ಬೆಂಬಲ

ಇತ್ತ ಧಾರವಾಡದಲ್ಲೂ ಪ್ರತಿಭಟನೆ ಜೋರಾಗಿದ್ದು, ಮಹದಾಯಿ ಹೋರಾಟಗಾರರಿಂದ ಬಂದ್‌ಗೆ ಬೆಂಬಲ ವ್ಯಕ್ಯವಾಗಿದೆ. ಆದರೆ ಎಂದಿನಂತೆ ಬಸ್ ಸಂಚಾರ, ಆಟೋ ಸಂಚಾರ, ಶಾಲೆ- ಕಾಲೇಜುಗಳು , ಸರ್ಕಾರಿ ಕಚೇರಿ ಆರಂಭವಾಗಿದೆ.

ಇಂದಿನ ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳು ಸೇರಿ ಮಹದಾಯಿ ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಕೇವಲ ಸಾಂಕೇತಿಕವಾಗಿ ಹೋರಾಟ ನಡೆಸಲು ನಿರ್ಧರಿಸಲಾಗಿದ್ದು, ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಲು ನಿರ್ಧರಿಸಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles