ರಾಮನಗರ: ಡಿಸೆಂಬರ್ 19 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ ಎಂದು ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ 16 ಕ್ಕೆ ಬಿಡುಗಡೆ ಮಾಡಬೇಕಿತ್ತು. ಧಾರ್ಮಿಕ ವೇದಿಕೆಯಲ್ಲಿ ರಾಜಕೀಯ ಬೇಡ ಎಂದು ಹೇಳಿದ್ದಕ್ಕೆ ಸೋಮವಾರ JDS ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.ಇನ್ನು ಇದೇ ವೇಳೆ ರಾಮನಗರ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಎಚ್ಡಿಕೆ,
ರಾಮನಗರದಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ. ಅಂತಿಮವಾಗಿ ಕಾರ್ಯಕರ್ತರು ಅಭ್ಯರ್ಥಿ ನಿರ್ಧಾರ ಮಾಡುತ್ತಾರೆ. ನೀವೇ ಅಭ್ಯರ್ಥಿ ಆಯ್ಕೆ ಮಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದೇನೆ.
ನಮ್ಮ ಕಾರ್ಯಕರ್ತರ ತೀರ್ಮಾನಕ್ಕೆ ತಲೆಬಾಗುತ್ತೇನೆ ಜೊತೆಗೆ ಅನಿತಾ ಕುಮಾರಸ್ವಾಮಿ ನಿಲ್ಲಬೇಕೋ ಅಂತಿಮವಾಗಿ ನಮ್ಮ ಕಾರ್ಯಕರ್ತರು ತೀರ್ಮಾನ ಮಾಡುತ್ತಾರೆ ಎಂದರು. 64ನೇ ವರ್ಷಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಲಿದೆ ಎಂದು ಕಾತರದಿಂದ ಕಾಯುತ್ತಿದ್ದ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯಾಗಿತ್ತು ಒಟ್ಟಿನಲ್ಲಿ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಡಿಸೆಂಬರ್ 19ಕ್ಕೆ ಪ್ರಕಟವಾಗಲಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಅನ್ನೋದು ಕುತೂಹಲ