Tuesday, March 28, 2023
spot_img
- Advertisement -spot_img

ಕಾಂಗ್ರೆಸ್‌ನ ನಾನಾಯಕಿ ಸಮಾವೇಶದಲ್ಲಿ ತಲೆಗೆ 2 ಸಾವಿರ, ಬಿಜೆಪಿ ಆರೋಪ..!

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್‌ನ ನಾ ನಾಯಕಿ ಕಾರ್ಯಕ್ರಮಕ್ಕೆ ತಲೆಗೆ 2 ಸಾವಿರ ರೂಪಾಯಿ ಕೊಟ್ಟು ಮಹಿಳೆಯರನ್ನು ಕರೆತರಲಾಗಿತ್ತು ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಅದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಚಿತ್ರವನ್ನೂ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ವಿರುದ್ಧ ಟ್ವೀಟ್‌ನಲ್ಲಿ ಕಾಲೆಳೆದಿರುವ ಬಿಜೆಪಿ, ಅಲ್ಲೇ ಡ್ರಾ, ಅಲ್ಲೇ ಬಹುಮಾನ ಅಂದ್ರೆ ಇದೇನಾ? ನಾ ನಾಯಕಿ ಕಾರ್ಯಕ್ರಮಕ್ಕೂ 2,000 ರೂ. ಕೊಟ್ಟೇ ಕರೆತರಲಾಗಿತ್ತು. ಶ್ರೀಮತಿ ಪ್ರಿಯಾಂಕಾ ಗಾಂಧಿ ನೇತೃತ್ವದ ಸಮಾವೇಶದಲ್ಲಿ ಹರಿದ ಕಾಂಚಾಣವೇ ಬಹುಶಃ ಕಾಂಗ್ರೆಸ್ಸಿಗರ ಗೃಹಲಕ್ಷ್ಮಿ ಯೋಜನೆ ಇರಬೇಕು ಎಂದು ವ್ಯಂಗ್ಯವಾಡಿದೆ. ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮಹಿಳಾ ಕಾಂಗ್ರೆಸ್‌ನ ನಾ ನಾಯಕಿ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ರಾಜ್ಯ ಕಾಂಗ್ರೆಸ್‌ನ ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ವಿಚಾರಗಳನ್ನು ಘೋಷಣೆ ಮಾಡಿದರು. ಇದೇ ವೇಳೆ ಗೃಹಲಕ್ಷ್ಮಿ ಬಾಂಡ್ ಅನ್ನೂ ಪ್ರದರ್ಶಿಸಿದರು. ಇದಕ್ಕೆ ಸರಣಿ ಟ್ವೀಟ್‌ಗಳ ಮೂಲಕ ಬಿಜೆಪಿ ತಿರುಗೇಟು ನೀಡಿತ್ತು.

ನಂತರ ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯಗಳನ್ನೇ ಪ್ರಶ್ನಿಸದ ಪ್ರಿಯಾಂಕಾ ಗಾಂಧಿ ಅವರು ಈಗ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಿರೋದು ಕಾಂಗ್ರೆಸ್ ಗ್ಯಾರಂಟಿ ಸುಳ್ಳಿನ ಸರಣಿ ಯ ಮುಂದುವರಿದ ಭಾಗ. ಛತ್ತೀಸ್‌ಘಡದಲ್ಲಿ ನಿರುದ್ಯೋಗಿ ಯುವತಿಯರಿಗೆ 2,500 ರೂ. ಮಾಸಿಕ ಭತ್ಯೆ ಕೊಡ್ತಿಲ್ಲ, ವಿಧವೆಯರಿಗೆ ಮಾಸಿಕ 1,000 ರೂ. ಪೆನ್ಷನ್ ಕೊಡ್ತಿಲ್ಲ, ಹಿಮಾಚಲ ಪ್ರದೇಶದಲ್ಲಿ 18-60 ವರ್ಷದ ಮಹಿಳೆಯರಿಗೆ 1,500ರೂ. ನೆರವು – ಸಿಕ್ತಿಲ್ಲ. ರಾಜಸ್ಥಾನದಲ್ಲಿ ನಿರುದ್ಯೋಗಿ ಯುವತಿಯರಿಗೆ 3,500 ರೂ. ಮಾಸಿಕ ನಿರುದ್ಯೋಗ ಭತ್ಯೆ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಏಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದೆ.

Related Articles

- Advertisement -

Latest Articles