ಚಿಕ್ಕೋಡಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಉಳಿವಿಗೆ ಹಲವು ಕ್ರಮಗಳನ್ನು ತೆಗೆದುಕೊಂಡರೂ ಫಲಿಸಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಶೈಕ್ಷಣಿಕ ಜಿಲ್ಲೆ ಎಂದೇ ಕರೆಸಿಕೊಳ್ಳುವ ಚಿಕ್ಕೋಡಿಯಲ್ಲಿ ಮೂರು ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚಿವೆ.
ಶೂನ್ಯ ದಾಖಲಾತಿಯಿಂದಾಗಿ ನಿಪ್ಪಾಣಿಯ ಶಂಕರಾನಂದ ನಗರದಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ, ರಾಯಬಾಗದಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಮೂಡಲಗಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗಳು ಬಾಗಿಲು ಮುಚ್ಚಿವೆ.
ಇದನ್ನೂ ಓದಿ: ದೇಶದ ಹೆಸರು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ: ಶರದ್ ಪವಾರ್
ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಗಡಿಭಾಗದಲ್ಲಿರುವ ಕನ್ನಡ ಶಾಲೆಗಳ ಬಂದ್ ಆಗುತ್ತಿದ್ದು, ಸರ್ಕಾರಿ ಕನ್ನಡ ಶಾಲೆಗಳ ಬಗ್ಗೆ ಅರಿವು ಮೂಡಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಕ್ಕೋಡಿ ಡಿಡಿಪಿಐ ಮೋಹನ ಹಂಚಾಟೆ, ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ, ಪೋಷಕರು ನಮಗೆ ಸಹಕಾರ ನೀಡುತ್ತಿಲ್ಲ. ಪೋಷಕರು ಮುಂದೆ ಬಂದು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಿದರೆ, ಖಂಡಿತವಾಗಿಯೂ ಶಾಲೆಗಳನ್ನು ಮತ್ತೆ ಆರಂಭಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: ‘ಇಂಡಿಯಾ ಹೆಸರು ಬದಲಿಸಿ ಬಿಜೆಪಿಯವರು ತಮ್ಮ ಸೋಲನ್ನು ನೋಡುತ್ತಿದ್ದಾರೆ’
ಅಲ್ಲದೆ ಚಿಕ್ಕೋಡಿ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು, 99 ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ ಎಂದೂ ವರದಿಯಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 8 ತಾಲ್ಲೂಕುಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಅತಿಥಿ ಶಿಕ್ಷಕರೇ ಕೆಲ ಶಾಲೆಗಳಿಗೆ ಸದ್ಯ ಆಸರೆಯಾಗಿದ್ದಾರೆ. ಸರ್ಕಾರ ಈ ಜಿಲ್ಲೆಯತ್ತ ಗಮನ ಹರಿಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಕ್ರಮ ಕೈಗೊಳ್ಳುತ್ತಾ ಅನ್ನುವುದನ್ನು ಕಾದುನೋಡಬೇಕಿದೆ..
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.