ಮಣಿಪುರ: ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ನಿಷೇಧಿತ ಉಗ್ರ ಸಂಘಟನೆಯ ಉಗ್ರರು ಈ ಹತ್ಯೆ ಮಾಡಿದ್ದು, ಮಣಿಪುರದ ಕಂಗ್ಪೋಪ್ಕಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ದುಷ್ಕರ್ಮಿಗಳು ವಾಹನದಲ್ಲಿ ಬಂದು ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿ ಭಾಗದಲ್ಲಿರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ನಡುವಿನ ಗ್ರಾಮಸ್ಥರ ಮೇಲೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : Central Govt : ಕಚೇರಿಯ ಹಳೆ ವಸ್ತುಗಳಿಂದ ₹600 ಕೋಟಿ ಗಳಿಸಿದ ಮೋದಿ ಸರ್ಕಾರ
ಜಿಲ್ಲೆಯ ಕಂಗ್ಗುಯಿ ಪ್ರದೇಶದ ಇರೆಂಗ್ ಮತ್ತು ಕರಮ್ ವೈಫೇಯ್ ಗ್ರಾಮಗಳ ನಡುವೆ ಬೆಳಿಗ್ಗೆ 8:30 ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳು ಶಂಕಿತರನ್ನು ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
“ವಾಹನದಲ್ಲಿ ಹೋಗುತ್ತಿದ್ದ ಮೂವರು ಕುಕಿ ವ್ಯಕ್ತಿಗಳನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ದಾರಿ ತಪ್ಪಿಸಿ ಗುಂಡಿಕ್ಕಿ ಕೊಂದ ಘಟನೆ ನಡೆದಿದೆ ಎಂದು ಕಾಂಗ್‌ಪೊಕ್ಪಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಥೋಲು ರಾಕಿ ತಿಳಿಸಿದ್ದಾರೆ.
ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ದಾಳಿ ನಡೆಸಲಾಗಿದ್ದು, ಶಂಕಿತರು ವಾಹನದಲ್ಲಿ ಪ್ರದೇಶದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಂದಹಾಗೆ ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೇ.03 ರಿಂದ ಆರಂಭವಾದ ಮಣಿಪುರದ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೂ 160 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಿಂದ ಗೊತ್ತಾಗಿದೆ.
ಇದನ್ನೂ ಓದಿ : ಇದನ್ನೂ ಓದಿ; ‘ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ ಅವಶ್ಯಕ; ಮೈತ್ರಿ ಅನಿವಾರ್ಯ’
ಈ ಗ್ರಾಮವು ಬೆಟ್ಟಗಳಲ್ಲಿ ನೆಲೆಗೊಂಡಿದೆ ಮತ್ತು ಬುಡಕಟ್ಟು ಜನರ ಪ್ರಾಬಲ್ಯವನ್ನು ಹೊಂದಿದೆ. ಸೆಪ್ಟೆಂಬರ್ 8 ರಂದು ತೆಂಗ್ನೌಪಾಲ್ ಜಿಲ್ಲೆಯ ಪಲ್ಲೆಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿ, 50 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಬೆನ್ನಲ್ಲೇ ಈ ಘಟನೆ ನಡೆದಿದೆ. ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಇಬ್ಬರು ಸಾವು, 45 ಮಂದಿಗೆ ಗಾಯ
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.