ಬೆಂಗಳೂರು: ರಾಜ್ಯ ಕೈ ಪಾಳೆಯದಲ್ಲಿ ನಾಯಕತ್ವ ಬದಲಾವಣೆ ಸಂಘರ್ಷ ಕೊನೆಯ ಹಂತ ತಲುಪಿದೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅಂತ ಹೇಳುತ್ತಿದ್ದಾರೆ. ಹೈಕಮಾಂಡ್ ಹೇಳಿದ್ರೆ ಮಾತ್ರ ಬಿಟ್ಟು ಕೊಡ್ತೀನಿ ಎನ್ನುತಿದ್ದಾರೆ.
ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟು, ಹೈಕಮಾಂಡ್ ಮಟ್ಟದಲ್ಲಿ ಸತತ ಪ್ರಯತ್ನ ನಡೆಸುತ್ತಲೇ ಇದ್ದಾರೆ. ಈ ನಡುವೆ ಕಾಂಗ್ರೆಸ್‌ನ 31 ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ವೇವಾಲ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಪತ್ರ ಬರೆದಿದ್ದಾರೆ. ಮೊದಲ ಬಾರಿ ಗೆದ್ದ 5 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.
31 ಕೈ ಶಾಸಕರಿಂದ ಹೈಕಮಾಂಡ್‌ಗೆ ಪತ್ರ..!
ಸಚಿವ ಸಂಪುಟ ಪುನರ್ ರಚನೆಗೆ ಒತ್ತಾಯಿಸಿ ರಾಜ್ಯದ 31 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಇದೇ ಮೊದಲ ಬಾರಿಗೆ ಆಯ್ಕೆಯಾಗಿರುವ 31 ಶಾಸಕರು ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಕೆಸಿ ವೇಣುಗೋಪಾಲ್, ರಣ್‌ದೀಪ್ ಸಿಂಗ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಪತ್ರ ಬರೆದಿದ್ದು, ಈ ಪತ್ರ ಇದೀಗ ವೈರಲ್ ಆಗಿದೆ.
ಪತ್ರದಲ್ಲಿ ಮಾಡಿರುವ ಮನವಿ ಏನು?
ಕಾಂಗ್ರೆಸ್ ನಲ್ಲಿ 38 ಶಾಸಕರು ಹೊಸದಾಗಿ ಗೆದ್ದಿದ್ದೇವೆ. ಬೇರೆ ರಾಜ್ಯಗಳಲ್ಲಿ ಮೊದಲ ಬಾರಿಗೆ ಗೆದ್ದವರು ಸಿಎಂ ಆಗಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೊದಲ ಬಾರಿ ಗೆದ್ದ ಶಾಸಕರಿಗೂ ಸಚಿವ ಸ್ಥಾನ ನೀಡಿ ಅವಕಾಶ ಕೊಡಬೇಕು ಎಂದು. ಮೊದಲಬಾರಿ ಗೆದ್ದ ಕನಿಷ್ಟ ಐದು ಶಾಸಕರಿಗೆ ಸಚಿಸ್ಥಾನ ಕೊಡಬೇಕೆಂದು ಮನವಿ ಮಾಡಿದ್ದಾರೆ. ನಾಯಕತ್ವ ಕದನ ತೀರ್ಮಾನಕ್ಕೂ ಮೊದಲೇ 31 ಶಾಸಕರ ಪತ್ರ ಇದೀಗ ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ದು ಮಾಡ್ತಿದೆ. ದಿನಾಂಕ ಇಲ್ಲದ ಪತ್ರ ವೈರಲ್ ಆಗಿದ್ದು, ಕಾಂಗ್ರೆಸ್ ಒಳಗೆ ಭಾರೀ ಕುತೂಹಲ ಹೆಚ್ಚಿಸಿದೆ