ಬೀದರ್: ಲಾರಿ ಹಾಗೂ ಟಂಟಂ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಡೆದಿದೆ.
ಶ್ರಾವಣ ಸೋಮವಾರ ಹಿನ್ನೆಲೆ ಚಂಡಕಾಪುರದ ಅಮೃತ ಕುಂಡಾ ಮಂದಿರಕ್ಕೆ ತೆರಳಿದ್ದರು. ಆದರೆ ದೇವರ ದರ್ಶನ ಪಡೆದು ಮರಳುವಾಗ ಅಪಘಾತ ಸಂಭವಿಸಿದೆ. ಮೃತರು ಮಹಾರಾಷ್ಟ್ರ ಮೂಲದವರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಫ್ರೀ ವೈ-ಫೈ ಝೋನ್; ಫ್ಯಾಕ್ಟ್ ಚೆಕ್ ಘಟಕ!
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಸವಕಲ್ಯಾಣ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮಹಾರಾಷ್ಟ್ರ ಉಮ್ಮರಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಶಾಸಕ ಶರಣು ಸಲಗರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.