ಮಧುರೈ: ಲಕ್ನೋದಿಂದ ಬಂದಿದ್ದ ರೈಲಿನ ಪ್ರವಾಸಿಗರ ಭೋಗಿಯಲ್ಲಿ ಅಗ್ನಿ ಅವಘಡ ಸಂಭವಿಸಿ 10 ಮಂದಿ ಮೃತಪಟ್ಟ ಘಟನೆ ತಮಿಳುನಾಡಿನ ಮಧುರೈ ನಿಲ್ದಾಣದಲ್ಲಿ ಇಂದು ನಡೆದಿದೆ. ಅಡುಗೆ ಕೋಚ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ.
15 ದಿನಗಳ ಪ್ರವಾಸಕ್ಕಾಗಿ ಉತ್ತರ ಪ್ರದೇಶದ ಲಕ್ನೋದಿಂದ ರೈಲು ಆಗಮಿಸಿತ್ತು. ಇಂದು ಬೆಳಗ್ಗೆ ಮಧುರೈ ನಿಲ್ದಾಣದಲ್ಲಿ ನಿಂತಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಈ ವೇಳೆ 9 ಮಂದಿ ಸಾವನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ವಿಕ್ರಮ್ ಲ್ಯಾಂಡರ್ ಚಂದ್ರನಲ್ಲಿ ಇಳಿದ ಸ್ಥಳ ಶಿವಶಕ್ತಿ ಕೇಂದ್ರ : ಪ್ರಧಾನಿ ಘೋಷಣೆ
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಒಳಗಿದ್ದವರು ಹೊರ ಓಡಿ ಬಂದಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ನಾಗರ್‌ಕೋಯಿಲ್‌ನ ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ದರ್ಶನ ಪಡೆದಿದ್ದ ಪ್ರವಾಸಿಗರು ಇಂದು ಮುಂಜಾನೆ ಮಧುರೈ ನಿಲ್ದಾಣ ತಲುಪಿದ್ದರು. ಉತ್ತರ ಪ್ರದೇಶದಿಂದ ಸುಮಾರು 60ಕ್ಕೂ ಹೆಚ್ಚು ಮಂದಿ ಈ ರೈಲಿನಲ್ಲಿ ಪ್ರವಾಸ ಹೊರಟ್ಟಿದ್ದರು ಎಂದು ತಿಳಿದುಬಂದಿದೆ.
ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ. ಜೊತೆಗೆ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ಮುಂದುವರೆದಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.