‘ನಾನು ಯಾವ ಬಣದ ನಾಯಕನೂ ಅಲ್ಲ, ಬಣ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ’

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಬದಲಾವಣೆಯ ಚರ್ಚೆ ಅಂತಿಮ ಘಟ್ಟ ತಲುಪಿದೆ. ಈ ವಿಚಾರದ ಕುರಿತು ಕುತೂಹಲಕಾರಿ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನನ್ನ ಬಳಿ ಯಾವ್ ಬಣವೂ ಇಲ್ಲ.. ನಾನು ಯಾವ ಬಣದ ನಾಯಕನೂ ಅಲ್ಲ. ನಾನು 140 ಶಾಸಕರಿಗೂ ಅಧ್ಯಕ್ಷ ಎಂದು ಹೇಳಿದ್ದಾರೆ.

ಕಾಂಗ್ರೆಸ್​​ ಸರ್ಕಾರಕ್ಕೆ ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಅಧಿಕಾರ ಹಂಚಿಕೆಯ ಜಟಾಪಟಿ ನಡೆದಿದೆ. ಡಿ.ಕೆ.ಶಿವಕುಮಾರ್ ಬಣದ ಕೆಲ ಸಚಿವರು, ಶಾಸಕರು ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಇದರ ಬೆನಲ್ಲೇ ಇತ್ತ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಣದ ಸಚಿವ ರಹಸ್ಯ ಸಭೆ ನಡೆಸಿದ್ದು, ಕರ್ನಾಟಕ ಕಾಂಗ್ರೆಸ್​​​ನಲ್ಲಿ ಮಹತ್ವದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಇದನ್ನೂ ಓದಿ : ನಾನೇ 5 ವರ್ಷ ಸಿಎಂ ಆಗಿರ್ತೀನಿ, ಬಜೆಟ್‌ ಕೂಡ ನಾನೇ ಮಂಡುಸ್ತೀನಿ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ಕಳೆದ ಎರಡೂವರೆ ವರ್ಷಗಳಿಂದ ಸಾಕಷ್ಟು ಔತಣಕೂಟ ನಡೆದಿದೆ. ನಾಲ್ವರು ಡಿಸಿಎಂ ಮಾಡಬೇಕು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಿಸಬೇಕು. ಸಂಪುಟಕ್ಕೆ ತಮ್ಮನ್ನು ಸೇರಿಸಿಕೊಳ್ಳಬೇಕೆಂದು ಸಾಕಷ್ಟು ಡಿನ್ನರ್ ಸಭೆ ನಡೆದಿವೆ. ಸಚಿವರ ಡಿನ್ನರ್ ಕೂಡ ಅದರ ಒಂದು ಭಾಗವೇ ಇದು ಎಂದು ಮಾರ್ಮಿಕವಾಗಿ ಹೇಳಿದರು.

ನನ್ ಹತ್ರ ಯಾವ್ ಬಣ್ಣನೂ ಇಲ್ಲ. ನನ್ ಹತ್ರ ಯಾವ್ ಬಣನೂ ಇಲ್ಲ.. ನಾನು 140 ಶಾಸಕರಿಗೆ ಅಧ್ಯಕ್ಷ. ನನಗೆ 140 ಜನನೂ ಪ್ರಮುಖ. ನಾನು ಯಾವ ಗುಂಪನ್ನೂ ಕರೆದುಕೊಂಡು ಹೋಗಲು ಇಷ್ಟವಿಲ್ಲ. ಬಣ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ ಎಂದರು.

ಇದೇ ವೇಳೆ 5 ವರ್ಷ ನಾನೇ ಸಿಎಂ ಆಗಿರುತ್ತೇನೆಂದು ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡಬೇಕು ಎಂದು ಹೇಳಿದ್ದಾರೆ. ಹೀಗಾಗಿ ಎಲ್ಲ ಶಾಸಕರೂ ತಮಗೆ ಮಂತ್ರಿ ಸ್ಥಾನಬೇಕು ಎಂದು ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಕೇಂದ್ರದ ನಾಯಕರನ್ನು ಭೇಟಿ ಮಾಡಿ ತಮ್ಮ ಮನವಿ ಮಾಡುತ್ತಿದ್ದಾರೆ ಎಂದರು.

ಇನ್ನು ಎರೆಡೂವರೆ ವರ್ಷ ತುಂಬಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಶುಭಾಶಯ ಹೇಳುತ್ತೇನೆ. ಅವರಿಗೆ ಎಲ್ಲವೂ ಒಳ್ಳೆಯದಾಗಲಿ ಎಂದು ಹಾರೈಸಿದರು. ಆ ಮೂಲಕ ಸಿಎಂ ಆಗಿ ತಾವೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

Leave a Reply

Your email address will not be published. Required fields are marked *