ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಕೆ.ಎನ್.ರಾಜಣ್ಣ ಪುತ್ರ, ಕಾರಣವೇನು?

ತುಮಕೂರು : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಕುರಿತ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಈ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ದೆಹಲಿಯಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕೇಂದ್ರ ಸಹಕಾರ, ಗೃಹ ಸಚಿವ ಅಮಿತ್ ಶಾ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿರುವ ಎಂಎಲ್‌ಸಿ ಆರ್.ರಾಜೇಂದ್ರ ಅವರು ಸಮಾರಂಭದ ನಂತರ ಅಮಿತ್‌ ಶಾ ಅವರೊಂದಿಗೆ ಖಾಸಗಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಅಮಿತ್ ಶಾ ಅವರು ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ಮುಖಂಡರಿಗೆ ರಾಜೇಂದ್ರ ಅವರನ್ನು ಪರಿಚಯ ಮಾಡಿಸಿದ್ದಾರೆ. ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ಸುಮಾರು ಅರ್ಧ ಗಂಟೆ ಕರ್ನಾಟಕದ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ಈ ವೇಳೆ ಶಾಸಕ ಕೆ.ಎನ್.ರಾಜಣ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ. ಮುಂದಿನ ರಾಜಕೀಯ ನಡೆಯ ಬಗ್ಗೆಯೂ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜೇಂದ್ರ ಅವರಿಗೆ ಹಸ್ತಲಾಘವ ಕೊಟ್ಟು ಬೆನ್ನು ತಟ್ಟಿ ಮುಂದೆ ಒಳ್ಳೆಯದಾಗುತ್ತದೆ ಎಂದು ಅಮಿತ್ ಶಾ ಶುಭ ಹಾರೈಸಿ ಕಳುಹಿಸಿದ್ದಾರೆ ಎನ್ನಲಾಗಿದೆ. ಈ ವಿಚಾರ ಈಗ ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದೆ.

Leave a Reply

Your email address will not be published. Required fields are marked *