ನನಗೇನು ಗೊತ್ತಿಲ್ಲ, ಏನೂ ಕೇಳ್ಬೇಡಿ, ನನಗೆ ಬಹಳ ಬೇಸವಾಗಿದೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿನ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೂರು ದಿನದಿಂದ ಇಲ್ಲೇ ಇದ್ದೇನೆ. ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ, ನನ್ನ ಬಳಿ ಹೇಳಲು ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈಗ ನಡೆದ ವಿದ್ಯಾಮನಗಳ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ ಎಂದರು.

ಇದನ್ನೂ ಓದಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ

ಇನ್ನು ನನಗೆ ಬಹಳ ಬೇಸರವಾಗಿದೆ. ಯಾವ ವಿಚಾರದಲ್ಲಿಯೂ ಹೇಳಲು ಏನೂ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಆಂತರಿಕ ಕಚ್ಚಾಟದ ಈ ರಾಜಕೀಯ ನಾಟಕಕ್ಕೆ ತೆರೆ ಎಳೆಯಲು ಎಐಸಿಸಿ ಅಧ್ಯಕ್ಷರು ಬಂದು ರಾಜ್ಯ ನಾಯಕರ ಕೋಪವನ್ನು ತಣ್ಣಗಾಗಿಸಲು ಹೆಜ್ಜೆ ಹಾಕಿದ್ದಾರೆ. ಆದರೆ ಬಿಕ್ಕಟ್ಟನ್ನು ನಿಭಾಯಿಸಲು ಮಾರ್ಗ ಅಷ್ಟು ಸುಲಭವಾಗಿರುವಂತೆ ಕಾಣುತ್ತಿಲ್ಲ.

Leave a Reply

Your email address will not be published. Required fields are marked *