ಬೆಂಗಳೂರು : ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಸೃಷ್ಟಿಸಿದೆ.
ಯತೀಂದ್ರ ಹೇಳಿಕೆಯ ಬೆನ್ನಲ್ಲೇ ವಿರೋಧ ಪಕ್ಷಗಳು ಕೂಡ ಈ ವಿಷಯಕ್ಕೆ ಧ್ವನಿಗೂಡಿಸಿ, ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿವೆ.
ಈ ಹೇಳಿಕೆಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ‘ಬಹಳ ಸಂತೋಷ, ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ’ ಎಂದು ಹೇಳಿದರು.
ಇದನ್ನೂ ಓದಿ : ನಾನು ಯಾವನಿಂದಲೂ ಕಲಿಬೇಕಾಗಿಲ್ಲ, ‘ಕೈ’ ಶಾಸಕನವಿರುದ್ಧವೇ ರಾಜಣ್ಣ ಕೆಂಡ
ಯತೀಂದ್ರ ಸಿದ್ದರಾಮಯ್ಯರ ಈ ಹೇಳಿಕೆಯ ಮೂಲಕ ಇದೀಗ ಮತ್ತೆ ಸಿಎಂ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಿದೆ. ಅತ್ತ ಡಿಕೆಶಿ ಬಣ ಜನವರಿ 6 ಅಥವಾ 9 ವರೆಗೂ ಕಾಯಿರಿ ಡಿಕೆಶಿ ಸಿಎಂ ಆಗೇ ಆಗ್ತಾರೆ ಅಂತಾ ಬಹಿರಂಗವಾಗೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡ್ತಿದ್ದಾರೆ.