ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್‌ನಲ್ಲಿ SDPI ಅಭ್ಯರ್ಥಿಗೆ ಜಮೀರ್ ಟೀಂನಿಂದ ₹10 ಕೋಟಿ ನೆರವು, ಹೈಕಮಾಂಡ್‌ಗೆ ದೂರು..!

ದಾವಣಗೆರೆ : ದಾವಣಗೆರೆ ಉಪಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಆಂತರಿಕ ಕಲಹ ಶುರುವಾಗಿದೆ. ಸ್ವಪಕ್ಷದ ಅಭ್ಯರ್ಥಿಯ ವಿರುದ್ಧವೇ ಕೆಲಸ ಮಾಡಿದ ಆರೋಪದ ಮೇಲೆ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಇಬ್ಬರು ಎಂಎಲ್‌ಸಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಹೈಕಮಾಂಡ್ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಏಪ್ರಿಲ್ 9 ರಂದು ನಡೆದ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಅವರ ವಿರುದ್ಧವಾಗಿ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಿಗೆ ಬೆಂಬಲ ನೀಡಿದ ಆರೋಪ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇಬ್ಬರು ಪರಿಷತ್ ಸದಸ್ಯರ ವಿರುದ್ಧ ಕೇಳಿ ಬಂದಿದೆ.

ಇದನ್ನೂ ಓದಿ : ವ್ಯಾಪಾರಕ್ಕೆ ಮುಸ್ಲೀಂ ರಾಷ್ಟ್ರ ಬೇಕು ಆದ್ರೆ ಇಲ್ಲಿನ ಅಲ್ಪಸಂಖ್ಯಾತರು ಬೇಡ, ಬಿಜೆಪಿಗೆ ಎರೆಡೆರಡು ನಾಲಿಗೆ

ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಎಂಎಲ್‌ಸಿಗಳಾದ ನಸೀರ್ ಅಹಮದ್ ಮತ್ತು ಅಬ್ದುಲ್ ಜಬ್ಬಾರ್ ಅವರು ಎಸ್‌ಡಿಪಿಐ ಅಭ್ಯರ್ಥಿಗೆ ರಹಸ್ಯವಾಗಿ ₹10 ಕೋಟಿ ಹಣಕಾಸಿನ ನೆರವು ನೀಡಿದ್ದಾರೆ ಹಾಗೂ ಪಕ್ಷದ ವಿರುದ್ಧ ಕಾರ್ಯ ಚಟುವಟಿಕೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಆರೋಪಿಸಿವೆ.

ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ಹೆಚ್ಚಾಗಿರುವುದರಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಈ ನಾಯಕರು ಭಾರೀ ಲಾಭಿ ನಡೆಸಿದ್ದರು. ಆದ್ರೆ ಹೈಕಮಾಂಡ್ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದ್ದು ಈ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ.

ಸದ್ಯ ಎಐಸಿಸಿ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಚಿವ ಜಮೀರ್ ಮತ್ತು ಎಂಎಲ್‌ಸಿಗಳ ವಿರುದ್ಧ ಯಾವ ಶಿಸ್ತು ಕ್ರಮ ಕೈಗೊಳ್ಳುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *