ಯೋಗೇಶ್ ಗೌಡ ಹತ್ಯೆ ಪ್ರಕರಣ, ಶಾಸಕ ವಿನಯ್ ಕುಲಕರ್ಣಿ ದೋಷಿ: ಕೋರ್ಟ್ ತೀರ್ಪು

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ದಿ.ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ.

ಒಟ್ಟು 21 ಆರೋಪಿಗಳಲ್ಲಿ A20 – ವಾಸುದೇವ್​​ ನಿಲೇಕಣಿ , A21 – ಸೋಮಶೇಖರ್​ ಬಸಪ್ಪ ನ್ಯಾಮಗೌಡ ನಿರ್ದೋಷಿ, ಮುತ್ತಗಿ ಹಾಗೂ ಶ್ರೀಶೈಲ ಬಿರಾದರ್ ಮಾಫಿ ಸಾಕ್ಷಿ ಎಂದು ಘೋಷಿಸಿದ್ದು, ಉಳಿದ 17 ಮಂದಿ ಅಪರಾಧಿಗಳನ್ನು ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚನೆ ನೀಡಿತು. Crpc 302, 120b, 201, 148, 149, ಸೆಕ್ಷನ್ ಅಡಿ ಆರೋಪಿಗಳು ದೋಷಿ ಎಂದು ತೀರ್ಪು ನೀಡಿತು. ಈ ಮೂಲಕ ಸತತ 10 ವರ್ಷಗಳ ನಂತರ ವಿಚಾರಣೆ ಬಳಿಕ ಕೊನೆಗೂ ಈ ಪ್ರಕರಣದಲ್ಲಿ ಶಿಕ್ಷೆಯಾಗಿ ನ್ಯಾಯಾಂಗ ಅಂತಿಮ ಮುದ್ರೆ ಬಿದ್ದಿದೆ. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಅಪರಾಧಿಯಾಗಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ ಕೋರಿ 18 ಪ್ರಮುಖ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ನ್ಯಾ. ಸಂತೋಷ್ ಗಜಾನನ ಭಟ್ ಅವರಿಂದ ಈ ತೀರ್ಪು ಪ್ರಕಟವಾಗಿದ್ದು, ಶಿಕ್ಷೆಯ ಪ್ರಮಾಣ ನಾಳೆ ಪ್ರಕಟವಾಗಲಿದೆ. ತೀರ್ಪು ಬಳಿಕ ಕೋರ್ಟ್ ಹಾಲ್ ನಲ್ಲಿಯೇ ಎಲ್ಲಾ ಆರೋಪಿಗಳನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆಯಲಾಯಿತು.

ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾಯಾಲಯವು ಏಪ್ರಿಲ್ 9ರಂದು ತೀರ್ಪು ಪ್ರಕಟಿಸುವುದಾಗಿ ಮೊದಲು ತಿಳಿಸಿತ್ತು. ಆದರೆ ತಾಂತ್ರಿಕ ಕಾರಣಗಳು ಹಾಗೂ ತೀರ್ಪು ರಚನೆ ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅದನ್ನು ಏಪ್ರಿಲ್ 15ಕ್ಕೆ ಮುಂದೂಡಲಾಗಿತ್ತು. ಇದೀಗ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ಕೊಲೆ ಆರೋಪಿಗಳ ಜೊತೆ ವಿನಯ್‌ಕುಲಕರ್ಣಿ ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದಿತು. ಒಟ್ಟು 3 ಚಾರ್ಜ್‌ಶೀಟ್‌ಗಳು ಸಲ್ಲಿಕೆಯಾಗಿದ್ದು, 113 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದೆ.

40 ಜನ ಸಾಕ್ಷಿಗಳ ವಿಡಿಯೋ ಹೇಳಿಕೆ ದಾಖಲಿಸಲಾಗಿದೆ. ಪ್ರಕರಣದ ತೀರ್ಪು ಹಿನ್ನೆಲೆಯಲ್ಲಿ ಕುಟುಂಬಸ್ಥರ ಜೊತೆ ನ್ಯಾಯಾಲಯಕ್ಕೆ ಕುಲಕರ್ಣಿ ಆಗಮಿಸಿದ್ದರು. ಧಾರವಾಡದಿಂದ ಬೆಂಬಲಿಗರು ಕೂಡ ಆಗಮಿಸಿದ್ದರು.

Leave a Reply

Your email address will not be published. Required fields are marked *