#BREAKING ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ..!

ಬೆಂಗಳೂರು : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಈಗ ತೀವ್ರ ಗಂಭೀರವಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಇದೀಗ ಶ್ವಾಸಕೋಶ ಸಂಬಂಧಿ ಕಾಯಿಲೆ ಉಲ್ಬಣಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಅಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶ್ವಾಸಕೋಶದ ಸಮಸ್ಯೆಯಿಂದಾಗಿ ಉಸಿರಾಟಕ್ಕೆ ತೊಂದರೆ ಕಾಣಿಸಿಕೊಂಡಿದ್ದು, ವೈದ್ಯರ ತಂಡ ನಿರಂತರವಾಗಿ ನಿಗಾ ವಹಿಸಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.

ಆದ್ರೆ, ಇದೀಗ ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಕಡಿಮೆಯಾಗದಿದ್ದರಿಂದ ಅವರನ್ನು ಕಳೆದ ಎರಡು ದಿನದ ಹಿಂದೆ ಬೆಂಗಳೂರಿನ ಕಿಮ್ಸ್‌​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *