ಬೆಂಗಳೂರು : ನಗರದಲ್ಲಿ ನಿನ್ನೆ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆಗೆ ಭಾರೀ ಅನಾಹುತಗಳು ಸಂಭವಿಸಿವೆ. ಮಳೆಯಿಂದಾಗಿ ಶಿವಾಜಿನಗರ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನ ಸಾವನ್ನಪ್ಪಿದ್ದಾರೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೇ ಕೇಂದ್ರ ಸರ್ಕಾರದಿಂದ ಮೃತರು ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯ ಪದತ್ಯಾಗಕ್ಕೆ ಮಾನಸಿಕವಾಗಿ ಸಿದ್ದರಾಗಿದ್ದಾರೆ : ರಾಜಣ್ಣ ಸ್ಫೋಟಕ ಹೇಳಿಕೆ
ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದ ಪರಿಣಾಮ ಬೀದಿಬದಿ ವ್ಯಾಪಾರ ಮಾಡ್ತುದ್ದ ಐವರು ಹಾಗೂ ಇಬ್ಬರು ಪಾದಚಾರಿಗಳು ಸೇರಿದಂತೆ 7 ಮಂದಿ ಉಸಿರು ಚೆಲ್ಲಿದ್ದು, ಬೆಂಗಳೂರಲ್ಲಿ ಶೋಕ ಮಡುಗಟ್ಟಿದೆ. ಘಟನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸಂಭವಿಸಿದ ಈ ಅನಾಹುತ ಅತ್ಯಂತ ದುರದೃಷ್ಟಕರ ಎಂದಿದ್ದಾರೆ.
‘ಕರ್ನಾಟಕದ ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ’ ಎಂದು ಪ್ರಧಾನ ಮಂತ್ರಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.
ಮೃತರಿಗೆ 2 ಲಕ್ಷ ಪರಿಹಾರ
ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ₹50,000 ರೂಪಾಯಿಗಳ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.