ಕಲಬುರಗಿ : ಅಪಾರ ರಾಜಕೀಯ ಅನುಭವ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದ್ರೆ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ
ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದೊಳಗಿನ ಆಂತರಿಕ ರಾಜಕೀಯ ಮತ್ತು ಗೊಂದಲಗಳ ಮಧ್ಯೆ, ರಾಜ್ಯದ ಜನರಿಗೆ ನೀಡಿದ ಉತ್ತಮ ಆಡಳಿತದ ಭರವಸೆಯನ್ನು ಈಡೇರಿಸುವುದು ಮುಖ್ಯ. ಖರ್ಗೆಯವರು ಮುಖ್ಯಮಂತ್ರಿಯಾದರೆ ನಾವು ತುಂಬಾ ಸಂತೋಷಪಡುತ್ತೇವೆ, ಯಾಕೆಂದ್ರೆ ಅವರು ಸಾಕಷ್ಟು ಅನುಭವ ಹೊಂದಿರುವ ಹಿರಿಯ ರಾಜಕಾರಣಿ. ಅವರು ಮುಖ್ಯಮಂತ್ರಿಯಾದ್ರೆ, ನಾವೆಲ್ಲರೂ ಅದನ್ನು ಸ್ವಾಗತಿಸುತ್ತೇವೆ ಎಂದರು.
ಇದನ್ನೂ ಓದಿ : ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
ಇನ್ನು ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಬಗ್ಗೆ ಮಾತನಾಡಿ, ಅದು ದಲಿತರು ಸೇರಿದಂತೆ ಜನರ ಬಯಕೆಯಾಗಿದ್ದು, ಈ ಕುರಿತು ಯಾವುದೇ ಲಾಬಿ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ದಲಿತ ಸಚಿವರು ಪದೇಪದೇ ಡಿನ್ನರ್ ಮೀಟಿಂಗ್ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಹೌದು, ನಾವು ಭೇಟಿ ಆಗುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗವಹಿಸಿದ್ದಾರೆ. ಅದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.
ಅಲ್ಲದೇ ಭೋಜನಕೂಟದ ವೇಳೆ ರಾಜಕೀಯ ಸೇರಿ ಹಲವು ವಿಷಯಗಳನ್ನು ಚರ್ಚಿಸುವುದು ಸಹಜ. ಅದರಲ್ಲಿ ಯಾವುದೇ ತಪ್ಪಿಲ್ಲ. ಸಮುದಾಯದ ಯಾವುದೇ ನಾಯಕನನ್ನು ಮುಖ್ಯಮಂತ್ರಿ ಮಾಡಿ ಎಂದು ನಾವು ಹೈಕಮಾಂಡ್‌ಗೆ ಕೇಳಿಲ್ಲ. ಅಂತಿಮ ತೀರ್ಮಾನ ಕಾಂಗ್ರೆಸ್ ಹೈಕಮಾಂಡ್‌ನದ್ದೇ ಎಂದು ತಿಳಿಸಿದರು.