ವಿಜಯ್ ಪ್ರಮಾಣವಚನ, ಮಿಳುನಾಡಿನಲ್ಲಿ ದಳಪತಿ ಅಬ್ಬರ ಶುರು..!

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ಆಳಿದ್ದ DMK, AIADMK ಪಕ್ಷಗಳ ದ್ವಿಪಕ್ಷೀಯ ಪ್ರಭುತ್ವವನ್ನು ಅಂತ್ಯಗೊಳಿಸಿ, ನಟ ದಳಪತಿ ವಿಜಯ್ ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇದು ಕೇವಲ ಅಧಿಕಾರ ಬದಲಾವಣೆಯಲ್ಲ, ಒಂದು ಹೊಸ ರಾಜಕೀಯ ಯುಗದ ಆರಂಭವಾಗಿದೆ ಎಂದು ರಾಜಕೀಯ ಪಂಡಿತರು ಬಣ್ಣಿಸಿದ್ದಾರೆ.

ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು ಮತ್ತು ಬೆಂಬಲಿಗರ ಸಮ್ಮುಖದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಟಿ ತ್ರಿಶಾ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು. ಎಂಜಿಆರ್, ಕರುಣಾನಿಧಿ ಮತ್ತು ಜಯಲಲಿತಾರಂತಹ ದಿಗ್ಗಜರು ಆಳಿದ ನೆಲದಲ್ಲಿ ಈಗ ವಿಜಯ್ ಡಳಿತ ಶುರುವಾಗಿದೆ.

ವಿಜಯ್ ಅವರ ರಾಜಕೀಯ ಪಯಣವು ಅವರ ಸಿನಿಮಾಗಳಂತೆಯೇ ರೋಚಕವಾಗಿದೆ. ತಮಿಳಗ ವೆಟ್ರಿ ಕಳಗಂ ಪಕ್ಷವನ್ನು ಕಟ್ಟಿ, ಹಳೆ ಮದ್ರಾಸ್‌ನ ರಾಜಕೀಯ ಸಂಪ್ರದಾಯಗಳನ್ನು ಭೇದಿಸುವುದು ಅಷ್ಟು ಸುಲಭವಾಗಿರಲಿಲ್ಲ. 2026ರ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಂತರವೂ ಅಧಿಕಾರ ಹಿಡಿಯಲು ಅವರು ಹತ್ತಾರು ಕಾನೂನು ಮತ್ತು ರಾಜಕೀಯ ಅಡೆತಡೆಗಳನ್ನು ಎದುರಿಸಬೇಕಾಯಿತು. ಜನಸಾಮಾನ್ಯರ ಧ್ವನಿಯಾಗಿ ಹೋರಾಡಿದ ವಿಜಯ್, ಅಂತಿಮವಾಗಿ ಭವ್ಯ ಗೆಲುವಿನ ಮೂಲಕ ಸಿಎಂ ವಿಜಯ್ ಆಗಿ ಹೊರಹೊಮ್ಮಿದ್ದಾರೆ. ಅವರ ಆಡಳಿತ ವೈಖರಿಯನ್ನ ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *