#BREAKING ಕೆಂಪು ಕೋಟೆ ಬಳಿ ಸ್ಫೋಟ, 8 ಸಾವು ಹಲವರಿಗೆ ಗಾಯ: ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್

ನವದೆಹಲಿ : ರಾಜಧಾನಿ ನವದೆಹಲಿಯಲ್ಲಿ ಇಂದು ಸಂಜೆ ಭಾರೀ ಸ್ಫೋಟ ಸಂಭವಿಸಿದೆ. ದೆಹಲಿಯ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ. ಇದರಿಂದ 8 ಜನರು ಮೃತಪಟ್ಟಿರುವುದು ತಿಳಿದುಬಂದಿದೆ. ಸುತ್ತಲೂ ಬೆಂಕಿ ಆವರಿಸಿದ ಕಾರಣ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದೆಹಲಿಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

ದೆಹಲಿಯ ಫರಿದೀಬಾದ್ ಬಳಿ ಭಯೋತ್ಪಾದಕರ ದಾಳಿ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿತ್ತು. ಎರಡು ಮನೆಗಳಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು. 2,500 ಕೆಜಿಗೂ ಹೆಚ್ಚು ಸ್ಫೋಟಕ ಪತ್ತೆಯಾಗಿತ್ತು. ಭಯೋತ್ಪಾದಕರ ಈ ಕೃತ್ಯವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿ ದಾಳಿ ವಿಫಲಗೊಳಿಸಿತ್ತು. ಇದರ ಬೆನ್ನಲ್ಲೇ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿದೆ. ಹೀಗಾಗಿ ಅನುಮಾನಗಳು ಹೆಚ್ಚಾಗಿದೆ. ಇದೇ ಕಾರಣಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ನೀಡಲಾಗಿದೆ. ದೆಹಲಿಯಿಂದ ಹೊರಹೋಗುವ, ಒಳ ಪ್ರವೇಶಿಸುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಮುಂಬೈನಲ್ಲೂ ಭದ್ರತೆ ಹೆಚ್ಚಳ ಮಾಡಲಾಗಿದ್ದು, ತೀವ್ರ ತಪಾಸಣೆ ನಡೆಯುತ್ತಿದೆ.

ಸಂಜೆ 6.55ರ ಸುಮಾರಿಗೆ ಇಂಡಿಯಾ ಗೇಟ್‌ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಕ್ಷಣ 7 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಯಿತು.

ಪ್ರಥಮ ವರ್ತಮಾನಗಳ ಪ್ರಕಾರ ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ಕರೆ ಬಂದಿದ್ದು, ನಂತರ ಹತ್ತಿರದ 3 ರಿಂದ 4 ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯನ್ನು ನಿಯಂತ್ರಿಸಲು ತಕ್ಷಣವೇ ಹಲವಾರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿವೆ. ಸದ್ಯ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಎನ್‌ಜಿ ಸಿಲಿಂಡರ್ ಸ್ಫೋಟದ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ದೃಢಪಟ್ಟಿಲ್ಲ

Leave a Reply

Your email address will not be published. Required fields are marked *