ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಕೆಯಾಗಿದೆ.
ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. ಸುಮಾರ್ 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ವಕೀಲ ನಟರಾಜ ಶರ್ಮಾ ಎಂಬುವರು ಲೋಕಾಯಕ್ತಕ್ಕೆ ದೂರು ನೀಡಿದ್ದಾರೆ.
ಆಹಾರ ಸರಬರಾಜಿಗೆ ಕಪ್ಪುಪಟ್ಟಿಯಲ್ಲಿರುವ ಕಂಪನಿಯೊಂದಕ್ಕೆ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಇಲಾಖೆಯ ನಿರ್ದೇಶಕರ ವಿರುದ್ಧವೂ ದೂರು ಸಲ್ಲಿಕೆಯಾಗಿದೆ.
ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್‌ಗೆ ಆಶಾದಾಯಕ: ಶಿವಲಿಂಗೇಗೌಡ
ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿಲ್ಲ ಎಂಬ ದೂರಿನ ಮೇರೆಗೆ ಸ್ಥಳೀಯ ಸೇವಾ ಸಂಘಗಳೇ ಆಹಾರ ಪೂರೈಕೆ ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು.
ಆದರೆ, ಈ ಇಲಾಖೆಯು ಆದೇಶ ಉಲ್ಲಂಘಿಸಿ, ಕಪ್ಪುಪಟ್ಟಿಯಲ್ಲಿರುವ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.