ಬೆಂಗಳೂರು: ಕಾಂಗ್ರೆಸ್‌ನಿಂದ ಟಿಕೆಟ್ ಸಿಗದಿದ್ದಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಗರದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದ, ಉದ್ಯಮಿ ಕೆಜೆಎಫ್ ಬಾಬು ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಸದಾಶಿವನಗರದ ಡಿಕೆ ಶಿವಕುಮಾರ್ ಮನೆಯಲ್ಲಿ ಅವರನ್ನು ಭೇಟಿಯಾದ ಕೆಜೆಎಫ್ ಬಾಬು, ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಎಂಪಿ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭಾ ಚುಣಾವಣೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೇಳಿದ್ದ ಬಾಬು, ಕಾಂಗ್ರೆಸ್‌ನಿಂದ ಅನುಮತಿ ಸಿಗದಿದ್ದಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಆರ್‌ವಿ ದೇವರಾಜ್ ಸೋಲಿಗೆ ಕಾರಣರಾಗಿದ್ದಾರೆ ಎಂಬ ಆರೋಪವೂ ಅವರ ಮೇಲಿದೆ. ಚುನಾವಣೆ ಮುಗಿದ ನಂತರ ಬಹಿರಂಗವಾಗಿ ಕಾಣಿಸಿಕೊಳ್ಳ ಬಾಬು, ಈಗ ಡಿಸಿಎಂ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಇದನ್ನೂ ಓದಿ; ‘ಕೈ’ ಹಿಡಿದ ಬೆಂಬಲಿಗನ ಹುಟ್ಟುಹಬ್ಬದಲ್ಲಿ ಸೋಮಶೇಖರ್ ಭಾಗಿ; ಮೋದಿ ಕಾರ್ಯಕ್ರಮದಿಂದ ದೂರ!
ಡಿಕೆಶಿ ಭೇಟಿಯಾದ ನಂತರ ಮಾತನಾಡಿದ ಅವರು, ‘ಕಾಂಗ್ರೆಸ್ ನಮ್ಮ ಮನೆ.. ನಾನು ಕಾಂಗ್ರೆಸ್ ಬಿಟ್ಟಿಲ್ಲ, ಅವರೇ ಕಳಿಸಿದ್ರು. ಈಗ ಮತ್ತೆ ಕಾಂಗ್ರೆಸ್ ಮನೆಗೆ ಬಂದಿದ್ದೇನೆ. ನಾನಂತು ಪಕ್ಷ ಬಿಟ್ಟು ಹೋಗಿಲ್ಲ. ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೇಳೋಕೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನನ್ನ ಗುರುಗಳು; ಅವರನ್ನು ಭೇಟಿ ಮಾಡೋಕೆ ಬಂದಿದ್ದೇನೆ’ ಎಂದು ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.