ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುತ್ತಿರುವುದನ್ನು ಖಂಡಿಸಿ ರೈತರು ಸಿಡಿದೆದ್ದು ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದೂ ಕೂಡ ನಗರದ ಹಲವೆಡೆ ರೈತರು ಪ್ರತಿಭಟನೆ ನಡೆಸಲಿದ್ದು, ಜಿಲ್ಲಾ ರೈತ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ.
ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಭೂಮಿತಾಯಿ ಹೋರಾಟ ಸಮಿತಿಯಿಂದ ವಿಭಿನ್ನ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ರೈತ ನಾಯಕ ನಂಜುಂಡೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಶ್ರೀರಂಗಪಟ್ಟಣದ ಕಾವೇರಿ ನದಿ ಸ್ನಾನಘಟ್ಟದದಿಂದ ತಾಲೂಕು ಕಚೇರಿವರೆಗೆ ಕಬ್ಬು ಚಳವಳಿ ನಡೆಸಲಿದ್ದಾರೆ.
ಇದನ್ನೂ ಓದಿ: ‘ಸಂಸತ್ತಿನ ಕಾರ್ಯಗಳನ್ನು ಸೋನಿಯಾ ರಾಜಕೀಯಗೊಳಿಸ್ತಿದ್ದಾರೆ’
ಇತ್ತ ಕೆಆರ್‌ಎಸ್‌ನಿಂದ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸುವಂತೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರ ಭೇಟಿ ಮಾಡಲಿದ್ದಾರೆ. ಇದೇ ವೇಳೆ ಸಿಎಂ ಜೊತೆ ಸಭೆ ನಡೆಸಲಿದ್ದು, ರೈತರ ಬೇಡಿಕೆ ಹಾಗೂ ಕಾವೇರಿ ನೀರು ಹಂಚಿಕೆ ಸಂಬಂಧ ಚರ್ಚಿಸಲಿದ್ದಾರೆ.
ಜಿಲ್ಲೆಯಲ್ಲಿ ರೈತರು ಹಮ್ಮಿಕೊಂಡಿರುವ ಪ್ರತಿಭಟನೆಗೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಸೇರಿ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಕೆ.ಆರ್.ಎಸ್ ಬದಲು ಶ್ರೀರಂಗಪಟ್ಟಣದಲ್ಲಿ ಸೆ.8 ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು, ಸೆ.11 ರಂದು ರಾಜ್ಯ ಹೆದ್ದಾರಿ ಸೇರಿ ಮೈ-ಬೆಂ ದಶಪಥ ಹೆದ್ದಾರಿ ತಡೆಗೆ ನಿರ್ಣಯಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.