ಬೆಂಗಳೂರು: ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಸೆ.10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಸಭೆಗೆ ಕರೆ ನೀಡಿದ್ದಾರೆ.
ಈ ಬಗ್ಗೆ ಜಂಟಿಯಾಗಿ ಮಾಹಿತಿ ನೀಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ, ಅರಮನೆ ಮೈದಾನದ ನಲಪಾಡ್ ಪೆವಿಲಿಯನ್‌ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಭೆ ಶುರುವಾಗಲಿದ್ದು, ಲೋಕಸಭೆ ಚುನಾವಣೆ ಸೇರಿದಂತೆ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳ ತಯಾರಿ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದರು.


ಶಾಸಕರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಸೋತ ಪಕ್ಷದ ಅಭ್ಯರ್ಥಿಗಳು ಹಾಗೂ ರಾಜ್ಯ ಘಟಕದಿಂದ ತಾಲ್ಲೂಕು ಘಟಕಗಳವರೆಗಿನ ಪ್ರಮುಖ ಪದಾಧಿಕಾರಿಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ ಎಂದು ಹೇಳಿದರು.
ಈ ಸಂಬಂಧ ಇಂದು ಜೆ.ಪಿ.ನಗರದಲ್ಲಿರುವ ಹೆಚ್.ಡಿ.ಕೆ ನಿವಾಸದಲ್ಲಿ ಜೆ.ಡಿ.ಎಸ್ ಪಕ್ಷದ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಹೆಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಜಿ. ಟಿ. ದೇವೇಗೌಡರು ಸೇರಿದಂತೆ ಪಕ್ಷದ ಮುಖಂಡರುಗಳು ಭಾಗಿಯಾಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.