ಬೆಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ ಎ. ಮಂಜು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
” ಅರಕಲಗೂಡು ವಿಧಾನಸಭಾ ಕ್ಷೇತ್ರದ ನನ್ನ ಮತದಾರ ಬಂಧುಗಳು, ಕಾರ್ಯಕರ್ತರುಗಳ ಅಭಿಪ್ರಾಯದಂತೆ ಈ ದಿನ ಭಾರತ ದೇಶದ ಮಾಜಿ ಪ್ರಧಾನ ಮಂತ್ರಿಗಳು, ಹಾಲಿ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆದ ಶ್ರೀಯುತ ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಸಿ. ಎಂ. ಇಬ್ರಾಹಿಂ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀಯುತ ಹೆಚ್. ಡಿ. ಕುಮಾರಸ್ವಾಮಿಯವರು, ಮಾಜಿ ಸಚಿವರಾದ ಶ್ರೀಯುತ ಹೆಚ್. ಡಿ. ರೇವಣ್ಣನವರು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀಯುತ ನಿಖಿಲ್ ಕುಮಾರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ, ಮಾಜಿ ಸಚಿವ ಎಚ್. ಡಿ. ರೇವಣ್ಣ ಸೇರಿದಂತೆ ಜೆಡಿಎಸ್ ಮುಖಂಡರು ಪಕ್ಷಕ್ಕೆ ಬರುವಂತೆ ಒತ್ತಾಯಿಸಿದರು. 1994ರಲ್ಲಿ ಎಚ್. ಡಿ. ದೇವೇಗೌಡರು ಸಂಸತ್ತಿನ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಸಹಾಯ ಮಾಡಿದ್ದೇನೆ” ಎಂದು ಹೇಳಿದ್ದರು.
ಮಂಜು ಜೆಡಿಎಸ್ ಸೇರ್ಪಡೆಯಾಗಿದ್ದು ರಥಯಾತ್ರೆಯಲ್ಲಿ ಭಾಗಿಯಾಗಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಅಂದಹಾಗೆ ಫೆಬ್ರವರಿ ತಿಂಗಳಿನಲ್ಲಿಯೇ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅರಕಲಗೂಡು ಕ್ಷೇತ್ರಕ್ಕೆ ಮಾಜಿ ಸಚಿವ ಎ. ಮಂಜು ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು.
ಕ್ಷೇತ್ರದಲ್ಲಿ ಪಕ್ಷ ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅರಕಲಗೂಡು ಕ್ಷೇತ್ರದ ರಾಜಕೀಯ ಸನ್ನಿವೇಶದ ಕುರಿತು ಚರ್ಚಿಸಿದ್ದೇನೆ ಎಂದು ಸಂತಸ ಹಂಚಿಕೊಂಡಿದ್ದರು.