Wednesday, November 29, 2023
spot_img
- Advertisement -spot_img

ಹಳೆಯ ಸಂಸತ್‌ಗೆ ಅಧಿಕೃತ ವಿದಾಯ : ಐತಿಹಾಸಿಕ ‘ಸೆಂಟ್ರಲ್ ಹಾಲ್‌’ನಲ್ಲಿ ವಿಶೇಷ ಕಾರ್ಯಕ್ರಮ

ನವದೆಹಲಿ : ಇಂದು ಹಳೆಯ ಸಂಸತ್ ಭವನದಿಂದ ಹೊಸ ಸಂಸತ್ ಭವನಕ್ಕೆ ಕಾರ್ಯ, ಕಲಾಪಗಳು ಸ್ಥಳಾಂತರಗೊಳ್ಳಲಿದೆ. ಅದಕ್ಕೂ ಮುನ್ನ 17ನೇ ಲೋಕಸಭೆಯ ಎಲ್ಲಾ ಸದಸ್ಯರು ಹಳೆಯ ಸಂಸತ್ ಕಟ್ಟಡದ ಮುಂದೆ ಫೋಟೋ ತೆಗೆಸಿಕೊಳ್ಳಲಿದ್ದಾರೆ. ಸರ್ಕಾರ ಹಳೆಯ ಸಂಸತ್ ಕಟ್ಟಡದ
ಐತಿಹಾಸಿಕ ‘ಸೆಂಟ್ರಲ್ ಹಾಲ್’ ನಲ್ಲಿ ಉಭಯ ಸದನಗಳ ಸದಸ್ಯರಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.

ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆಯ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯ ಸಭೆಯ ಸಭಾನಾಯಕ ಪಿಯೂಷ್ ಗೋಯಲ್ ಮತ್ತು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ : ಇಂದಿನಿಂದ ಹೊಸ ಸಂಸತ್ ಭವನದಲ್ಲಿ ಅಧಿವೇಶನ

ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ಪ್ರಸ್ತುತ ಲೋಕಸಭೆಯ ಅತ್ಯಂತ ಹಿರಿಯ ಸದಸ್ಯೆಯಾಗಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜ್ಯಸಭೆಯ ಅತ್ಯಂತ ಹಿರಿಯ ಸದಸ್ಯರಾಗಿ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರು ಉಭಯ ಸದನಗಳಲ್ಲಿ ಸುದೀರ್ಘ ಅಧಿಕಾರಾವಧಿಯನ್ನು ಹೊಂದಿರುವ ವ್ಯಕ್ತಿಯಾಗಿ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

ಮೇನಕಾ ಗಾಂಧಿಯವರು ಉತ್ತರ ಪ್ರದೇಶದ ಪಿಲಿಭಿತ್‌ನಿಂದ 1989 ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಚುನಾಯಿತರಾದರು. ನಂತರ 1991ರ ಚುನಾವಣೆಯಲ್ಲಿ ಸೋತರು. ಬಳಿಕ ಸತತವಾಗಿ ಲೋಕಸಭೆಗೆ ಆಯ್ಕೆಯಾಗುತ್ತಾ ಬಂದಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರು 1991ರಿಂದ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಶಿಬು ಸೊರೇನ್ ಅವರು 1980ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾದರು. 2002 ರಲ್ಲಿ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆಯಾದರು.

ಇಂದು ಹೊಸ ಸಂಸತ್ ಭವನದಲ್ಲಿ ಲೋಕಸಭೆ ಕಲಾಪ ಮಧ್ಯಾಹ್ನ 1 :15ಕ್ಕೆ ಮತ್ತು ರಾಜ್ಯಸಭೆ ಕಲಾಪ 2:15ಕ್ಕೆ ಪ್ರಾರಂಭವಾಗಲಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles