ನವದೆಹಲಿ: ಎಎಪಿ ಸಂಸದ ರಾಘವ್ ಚಡ್ಡಾ ಅವರಿಗೆ ಕೊನೆಗೂ ಕಂಕಣಭಾಗ್ಯ ಕೂಡಿ ಬಂದಿದ್ದು, ನಟಿ ಪರಿಣಿತಿ ಚೋಪ್ರಾ ಅವರ ಜೊತೆ ಹಸೆಮಣೆ ಏರುವ ದಿನಾಂಕ ರಿವೀಲ್ ಆಗಿದೆ.
ಬಲ್ಲಮೂಲಗಳ ಪ್ರಕಾರ ಇದೇ ಸೆಪ್ಟೆಂಬರ್ 24ರಂದು ರಾಘವ್-ಪರಿಣಿತಿ ಅವರ ಅದ್ಧೂರಿ ವಿವಾಹ ನೆರವೇರಲಿದೆ. ಸೆಪ್ಟೆಂಬರ್ 23 ಮತ್ತು 24ರಂದು ರಾಜಸ್ಥಾನದ ಲೀಲಾ ಪ್ಯಾಲೇಸ್ ಮತ್ತು ದಿ ಒಬೆರಾಯ್ ಉದಯ ವಿಲಾಸದಲ್ಲಿ ಅದ್ದೂರಿಯಾಗಿ ವಿವಾಹ ನಡೆಯಲಿದೆ.
ಮದುವೆಯ ಬಳಿಕ ಚಂಧೀಗಡದಲ್ಲಿ ಸೆ.30 ಅದ್ಧೂರಿ ಆರತಕ್ಷತೆ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಆಮಂತ್ರಣ ಪತ್ರಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.


ಹಳದಿ ಶಾಸ್ತ್ರ, ಮೆಹೆಂದಿ, ಸಂಗೀತ ಕಾರ್ಯಕ್ರಮಗಳೂ ಇವೆ. ಈ ಮದುವೆಗೆ 200ಕ್ಕೂ ಹೆಚ್ಚು ಅತಿಥಿಗಳು ಮತ್ತು 50ಕ್ಕೂ ಹೆಚ್ಚು ವಿವಿಐಪಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಮದುವೆ ಸಮಾರಂಭ ನಡೆಯುವ ಸ್ಥಳಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಹಲವು ದಿನಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಹಕ್ಕಿಗಳು ಕೊನೆಗೂ ದಾಂಪತ್ಯಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕೆಲವು ತಿಂಗಳ ಹಿಂದೆಯಷ್ಟೇ ಎಂಗೇಜ್ ಆಗಿರುವ ವಿಚಾರವನ್ನು ಈ ಜೋಡಿ ರಿವೀಲ್ ಮಾಡಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.