Wednesday, November 29, 2023
spot_img
- Advertisement -spot_img

ಮಾಜಿ ಸಂಸದೆ, ನಟಿ ವಿಜಯಶಾಂತಿ ಕಾಂಗ್ರೆಸ್ ಸೇರ್ಪಡೆ!

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ರಾಜೀನಾಮೆ ನೀಡಿರುವ ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಗೊಂಡಿದ್ದಾರೆ.

ಖರ್ಗೆ ಅವರು ವಿಜಯಶಾಂತಿ ಅವರಿಗೆ ಕಾಂಗ್ರೆಸ್ ಸ್ಕಾರ್ಫ್ ನೀಡಿ ಪಕ್ಷಕ್ಕೆ ಔಪಚಾರಿಕವಾಗಿ ಆಹ್ವಾನ ನೀಡಿದ್ದಾರೆ. 2020ರಲ್ಲಿ ಕಾಂಗ್ರೆಸ್ ತೊರೆದು ಕೇಸರಿ ಪಕ್ಷಕ್ಕೆ ಸೇರಿದ್ದ ಮಾಜಿ ಬಿಆರ್‌ಎಸ್ ಸಂಸದೆ ಇತ್ತೀಚಿನ ದಿನಗಳಲ್ಲಿ ಬಿಜೆಪಿಯಿಂದ ದೂರ ಉಳಿದಿದ್ದರು.

ಇದನ್ನೂ ಓದಿ: ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ.75 ರಷ್ಟು ಉದ್ಯೋಗ ಮೀಸಲಾತಿ ನಿಯಮ ರದ್ದು: ಹೈಕೋರ್ಟ್ ಆದೇಶ

ನಟ-ರಾಜಕಾರಣಿಯು 2009 ರಲ್ಲಿ ತನ್ನ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು BRS (ಆಗ ಟಿಆರ್ಎಸ್)ನಿಂದ ಮೇದಕ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಗೆದ್ದಿದ್ದರು. ಬಳಿಕ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರೊಂದೊಗಿನ ಭಿನ್ನಾಭಿಪ್ರಾಯದಿಂದಾಗಿ ಅವರು ಕಾಂಗ್ರೆಸ್ ಸೇರಿದ್ದರು.

ಇದನ್ನೂ ಓದಿ: ಮತದಾರರಿಗೆ ಬಿಜೆಪಿ ಹಣ, ಮದ್ಯ ಹಂಚುತ್ತಿದೆ: ಕಮಲ್‌ನಾಥ್ ಆರೋಪ

ಕಾಂಗ್ರೆಸ್ ಟಿಕೆಟ್ ನೀಡಿದ್ದರೂ ಸೋತ ಬಳಿಕ ಬಿಜೆಪಿಗೆ ಸೇರಿದ್ದರು. ಆದರೆ ಅಲ್ಲಿ ವಿಧಾನಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಟಿಕೆಟ್ ನಿರಾಕರಿಸಿತ್ತು. ಹೀಗಾಗಿ ಬಿಜೆಪಿ ರಾಜೀನಾಮೆ ನೀಡಿ ಮತ್ತೆ ಕಾಂಗ್ರೆಸ್ ಸೇರಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles