ಬೆಂಗಳೂರು: ಕೃಷಿ ಸಚಿವ, ನಟ ಬಿ.ಸಿ. ಪಾಟೀಲ್ ಈ ಬಾರಿ ಗೆದ್ದೇ ಗೆಲ್ಲುತ್ತಾರೆ ಎಂದು ನಟಿ ಪ್ರೇಮಾ ಅಭಿಪ್ರಾಯಪಟ್ಟಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿ, ಬಿ.ಸಿ.ಪಾಟೀಲರು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಉತ್ತಮ ವ್ಯಕ್ತಿತ್ವ ಅವರದ್ದು , ಈ ಬಾರಿ ಅವರ ಗೆಲವು ಖಚಿತ ಎಂದರು.
ನನಗೆ ರಾಜಕೀಯದ ಬಗ್ಗೆ ಗೊತ್ತಿಲ್ಲ. ಪ್ರಚಾರದ ಬಗ್ಗೆ ನನಗೇನೂ ಗೊತ್ತಿಲ್ಲ. ನಾನು ಯಾವಾಗಲೂ ರಾಜಕೀಯದಿಂದ ದೂರ. ಪಾಟೀಲ್ ಅವರ ಜೊತೆ ಒಳ್ಳೆಯ ಬಾಂಧವ್ಯವಿದೆ. ಅದೇ ನನ್ನನ್ನು ಇಲ್ಲಿಗೆ ಕರೆತಂದಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.
ಬಿ ಸಿ. ಪಾಟೀಲರು ಒಳ್ಳೆಯ ಕೆಲಸ ಮಾಡಿದ್ದಾರೆ, ಹಾಗಾಗಿ ಮತ್ತೊಮ್ಮೆ ಆಯ್ಕೆಯಾಗುತ್ತಾರೆ,‘ಬಿ.ಸಿ.ಪಾಟೀಲರು ಫೋನ್ ಮಾಡಿದ್ದರು. ನಮ್ಮ ತಂದೆ ನಿಧನರಾಗಿದ್ದಾಗ ಅವರು ಬಂದಿದ್ದರು. ಹೀಗಾಗಿ ಅವರ ಮೇಲಿನ ಗೌರವದಿಂದ ನಾನು ಬಂದಿದ್ದೇನೆ ಎಂದು ತಿಳಿಸಿದರು.