Sunday, September 24, 2023
spot_img
- Advertisement -spot_img

Nitin Gadkari : ಡೀಸೆಲ್‌ ವಾಹನಗಳ ಮೇಲೆ ಶೇ.10ರಷ್ಟು GST : ಉಲ್ಟಾ ಹೊಡೆದ ನಿತಿನ್ ಗಡ್ಕರಿ

ವದೆಹಲಿ: ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ ಶೇ.10 ರಷ್ಟು ಜಿಎಸ್‌ಟಿಯನ್ನು ಸೂಚಿಸುವ ಮಾಧ್ಯಮ ವರದಿಗಳನ್ನು ಸ್ಪಷ್ಟಪಡಿಸುವ ತುರ್ತು ಅಗತ್ಯವಿದೆ. ಅಂತಹ ಯಾವುದೇ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಸಕ್ರಿಯ ಪರಿಗಣನೆಯಲ್ಲಿಲ್ಲ ಎಂಬುದನ್ನು ಸ್ಪಷ್ಟಪಡಿಸುವುದು ಅತ್ಯಗತ್ಯವಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ನಿತಿನ್ ಗಡ್ಕರಿ, ಅಂತಹ ಯಾವುದೇ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಸಕ್ರಿಯ ಪರಿಗಣನೆಯಲ್ಲಿಲ್ಲ ಎಂಬುದನ್ನು ಸ್ಪಷ್ಟಪಡಿಸುವುದು ಅತ್ಯಗತ್ಯ. 2070 ರ ವೇಳೆಗೆ ಕಾರ್ಬನ್ ನೆಟ್ ಶೂನ್ಯವನ್ನು ಸಾಧಿಸಲು ಮತ್ತು ಡೀಸೆಲ್‌ನಂತಹ ಅಪಾಯಕಾರಿ ಇಂಧನಗಳಿಂದ ಉಂಟಾಗುವ ವಾಯು ಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡಲು ಮತ್ತು ಆಟೋಮೊಬೈಲ್ ಮಾರಾಟದಲ್ಲಿನ ತ್ವರಿತ ಬೆಳವಣಿಗೆಗೆ ಅನುಗುಣವಾಗಿ, ಸ್ವಚ್ಛ ಮತ್ತು ಹಸಿರು ಪರ್ಯಾಯ ಇಂಧನಗಳನ್ನು ಸಕ್ರಿಯವಾಗಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಈ ಇಂಧನಗಳು ಆಮದು ಬದಲಿಗಳಾಗಿರಬೇಕು, ವೆಚ್ಚ-ಪರಿಣಾಮಕಾರಿ, ಸ್ಥಳೀಯ ಮತ್ತು ಮಾಲಿನ್ಯ-ಮುಕ್ತವಾಗಿರಬೇಕು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : Nitin Gadkari : ಡೀಸೆಲ್‌ ವಾಹನಗಳ ಮೇಲೆ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ : ನಿತಿನ್‌ ಗಡ್ಕರಿ

ನಿತಿನ್ ಗಡ್ಕರಿ ಹೇಳಿದ್ದೇನೆ?

ಡೀಸೆಲ್ ಚಾಲಿತ ವಾಹನಗಳ ಮೇಲೆ ಶೇ.10ರಷ್ಟು ಹೆಚ್ಚುವರಿ ಸರಕು ಮತ್ತು ಸೇವಾ ತೆರಿಗೆ (GST)ಯನ್ನು ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.

ಇಂದು ಆಟೋಮೊಬೈಲ್ ಲಾಬಿ ಗ್ರೂಪ್, ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಗಡ್ಕರಿ, ನಾನು ಈಗಾಗಲೇ ಒಂದು ಪತ್ರವನ್ನು ಸಿದ್ಧಪಡಿಸಿಟ್ಟುಕೊಂಡಿದ್ದೇನೆ. ನಾನು ಇಂದು ಸಂಜೆ ಹಣಕಾಸು ಸಚಿವರಿಗೆ ಇದನ್ನು ಹಸ್ತಾಂತರಿಸುತ್ತೇನೆ, ಡೀಸೆಲ್ ವಾಹನಗಳು ಮತ್ತು ಎಲ್ಲಾ ಎಂಜಿನ್‌ಗಳ ಮೇಲೆ ಹೆಚ್ಚುವರಿ ಶೇ.10 ರಷ್ಟು ಜಿಎಸ್‌ಟಿ ಹಾಕಲು ಪ್ರಸ್ತಾಪಿಸುತ್ತೇನೆ. ಅದು ಡೀಸೆಲ್‌ನಲ್ಲಿ ಚಲಿಸುವ ಎಲ್ಲಾ ರೀತಿಯ ವಾಹನಗಳಿಗೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Central Govt : ಕಚೇರಿಯ ಹಳೆ ವಸ್ತುಗಳಿಂದ ₹600 ಕೋಟಿ ಗಳಿಸಿದ ಮೋದಿ ಸರ್ಕಾರ

ಇನ್ನು ಮುಂದುವರೆದು ಮಾತನಾಡಿದ ಅವರು, ಡೀಸೆಲ್‌ ಚಾಲಿತ ವಾಹನಗಳ ಉತ್ಪಾದನೆ ಹಾಗೂ ಮಾರಾಟವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಉದ್ಯಮವೇ ಸ್ವಯಂಪ್ರೇರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಲ್ಲದೇ, ಇದ್ದಲ್ಲಿ ಇಂಥ ವಾಹನಗಳ ಮಾರಾಟ ಹಾಗೂ ಉತ್ಪಾದನೆಗಳ ಮೇಲೆ ಕಡಿವಾಣ ಹೇರುವಂಥ ಕ್ರಮಗಳನ್ನು ಸ್ವತಃ ಸರ್ಕಾರವೇ ಕೈಗೊಳ್ಳುತ್ತದೆ. ಸರ್ಕಾರಕ್ಕೆ ಅದನ್ನು ಬಿಟ್ಟು ಬೇರೆ ದಾರಿ ಕೂಡ ಇರೋದಿಲ್ಲ ಎಂದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles