Monday, December 4, 2023
spot_img
- Advertisement -spot_img

ಖಾಸಗಿ ವ್ಯಕ್ತಿಗಳಿಗೆ 7 ಸ್ಮಾರಕಗಳ ಅಭಿವೃದ್ಧಿಗೆ ದತ್ತು: ಸಚಿವ ಹೆಚ್‌. ಕೆ. ಪಾಟೀಲ್‌

ಬೆಂಗಳೂರು: ಕಲ್ಯಾಣ ಕರ್ನಾಟಕದ ಹಲವು ಸ್ಮಾರಕಗಳನ್ನು ಈಗಾಗಲೇ ಪರಿಶೀಲನೆ ನಡೆಸಲಾಗಿದ್ದು, 7 ಸ್ಮಾರಕಗಳ ಅಭಿವೃದ್ಧಿಪಡಿಸಲು ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಕೆ.ಪಾಟೀಲ್, ಮೊದಲ ಹಂತದ ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ ಕಾರ್ಯಕ್ರಮ ಯಶಸ್ವಿಯಾಗಿದ್ದು, ಸ್ಮಾರಕಗಳ ದತ್ತು ಯೋಜನೆಗೆ ಹಲವು ಸಂಸ್ಥೆಗಳು ಸ್ವಯಂಪ್ರೇರಿತರಾಗಿ ಸ್ಪಂದಿಸಿವೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ ಬಸವ ಕಲ್ಯಾಣದಲ್ಲಿ ನಿರ್ಮಾಣ ಹಂತದಲ್ಲಿರುವ ಅನುಭವ ಮಂಟಪಕ್ಕೆ, ಬಸವ ಕಲ್ಯಾಣ ಕೋಟೆಯಲ್ಲಿ ಅಳವಡಿಸಿರುವ ‘ಲೇಸರ್ ಶೋ’ ವೀಕ್ಷಿಸಿ, ಕೋಟೆಯ ದತ್ತು ಪತ್ರವನ್ನು ಬೀದರ್ ಜಿಲ್ಲೆಯ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವಿತರಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : ನಮ್ಮ ಪ್ರಣಾಳಿಕೆಗಳನ್ನು ಬಿಜೆಪಿ ಕಾಪಿ ಮಾಡ್ತಿದೆ: ಶಾಮನೂರು ಶಿವಶಂಕರಪ್ಪ

3 ದಿನಗಳ ಮೊದಲನೇ ಹಂತದಲ್ಲಿ ಬೀದರ್, ಕಲ್ಬುರ್ಗಿ ಮತ್ತು ಯಾದಗಿರಿ ಜಿಲ್ಲೆಯ ದರ್ಶನ ಪಡೆಯಲಾಯಿತು. 7 ಸ್ಮಾರಕಗಳನ್ನು ಆಸಕ್ತ ಖಾಸಗಿಯವರಿಗೆ ದತ್ತು ಒಪ್ಪಿ, ಪತ್ರ ವಿತರಿಸಲಾಯಿತು. ಈ ಸ್ಮಾರಕಗಳಲ್ಲಿ ಸ್ವಚ್ಛತೆ, ಮೂಲಭೂತ ಸೌಲಭ್ಯ ಹಾಗೂ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಮತ್ತು ಪ್ರವಾಸಿ ತಾಣಗಳಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಐತಿಹಾಸಿಕ ಬೀದರ್ ಜಿಲ್ಲೆಯ ನರಸಿಂಹ ಝರಣಾ ದೇಗುಲ ದರ್ಶನದೊಂದಿಗೆ ಆರಂಭವಾದ ಸಚಿವರ ತಂಡದ ಪ್ರವಾಸ ಕಾರ್ಯಕ್ರಮ, ಬೀದರ್‌ನ ಅಷ್ಟಕೋನಾಕಾರದ ಬಾವಿಯ ವೀಕ್ಷಣೆ ಮಾಡಲಾಯಿತು. ಇದಾದ ನಂತರ ಇರಾನ್ ದೇಶದ ಸುರಂಗ ಕಾಲುವೆಗಳನ್ನು ಹೋಲುವ ನೀರಿನ ಕರೇಜ್‌ ನ್ನು ತಂಡ ವೀಕ್ಷಿಸಿತು. ನೂರಾರು ವರ್ಷಗಳ ಹಿಂದೆ ನಿರ್ಮಿಸಿರುವ ಈ ಸುರಂಗ ಕಾಲುವೆಗಳನ್ನು ಅಭಿವೃದ್ಧಿ ಪಡಿಸಿ ಸಂರಕ್ಷಿಸುವ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ ಎಂದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles