Monday, December 4, 2023
spot_img
- Advertisement -spot_img

ಪ್ರಧಾನಿ ಮೋದಿ ಡಿಗ್ರಿ ಕೇಸ್; ಸಮನ್ಸ್ ಜಾರಿ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಕುರಿತು ಹೇಳಿಕೆ ನೀಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆಯಾಗಿದೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ವಿಚಾರಣೆ ನೀಡಲಾದ ಸಮನ್ಸ್ ಅನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ: ವಿದೇಶಗಳಲ್ಲಿ ಸಿಲುಕಿಕೊಂಡವರಲ್ಲಿ ಕೆನಡಾ ಪ್ರಧಾನಿ ಮೊದಲಿಗರಲ್ಲ : ಇಲ್ಲಿದೆ ಲಿಸ್ಟ್

ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಅರ್ಜಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಗುಜರಾತ್ ವಿಶ್ವವಿದ್ಯಾನಿಲಯವು (ಜಿಯು) ತನ್ನ ರಿಜಿಸ್ಟ್ರಾರ್ ಪಿಯೂಷ್ ಎಂ ಪಟೇಲ್ ಮೂಲಕ ಪಿಎಂ ಮೋದಿ ಅವರ ಪದವಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ವಿರುದ್ಧ ಹೇಳಿಕೆ ನೀಡಿದ್ದ ಕೇಜ್ರಿವಾಲ್ ಹಾಗೂ ಎಎಪಿ ನಾಯಕ ಸಂಜಯ್ ಸಿಂಗ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದೆ.

ದೂರಿನ ಹಿನ್ನೆಲೆಯಲ್ಲಿ ಮೆಟ್ರೋಪಾಲಿಟನ್ ನ್ಯಾಯಾಲಯವು ಇಬ್ಬರೂ ನಾಯಕರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ನಾಯಕರು ಸಮನ್ಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಸೆಷನ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ದ್ವೇಷ ಹರಡುವುದನ್ನು ನೋಡುತ್ತಾ ಕೈಕಟ್ಟಿ ಕೂರುವುದಿಲ್ಲ; ಸಿಎಂ

ಕೇಜ್ರಿವಾಲ್ ಅವರು ನೀಡಿದ ಒಂದು ಹೇಳಿಕೆ ಮತ್ತು ಪಟೇಲ್ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ‘ಪ್ರಧಾನಿ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಓದಿದ್ದರೆ, ಗುಜರಾತ್ ವಿಶ್ವವಿದ್ಯಾಲಯವು ತಮ್ಮ ಹಳೆಯ ವಿದ್ಯಾರ್ಥಿ ಪ್ರಧಾನಿಯಾಗಿದ್ದಾನೆ ಎಂದು ಸಂಭ್ರಮಿಸಬೇಕು ಮತ್ತು ಅವರು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಮತ್ತು ಪದವಿಯನ್ನು ಬಹಿರಂಗಪಡಿಸುತ್ತಿಲ್ಲ’ ಎಂದಿದ್ದರು.

ಗುಜರಾತ್ ವಿಶ್ವವಿದ್ಯಾನಿಲಯದ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಈ ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ಅವರು ಟ್ವೀಟ್ ಕೂಡ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles