Thursday, September 28, 2023
spot_img
- Advertisement -spot_img

‘ಬಿಜೆಪಿ ಜೊತೆ ಮೈತ್ರಿ ಇಲ್ಲ’; ಶಾಕ್ ಕೊಟ್ಟ ಎಐಎಡಿಎಂಕೆ!

ಚೆನ್ನೈ: ಎಐಎಡಿಎಂಕೆ ಮತ್ತು ಬಿಜೆಪಿ ನಡುವೆ ಮೈತ್ರಿ ಇಲ್ಲ ಎಂದು ಎಐಎಡಿಎಂಕೆ ನಾಯಕ ಡಿ.ಜಯಕುಮಾರ್ ಹೇಳಿದ್ದಾರೆ. ದಿವಂಗತ ಸಿ.ಎನ್ ಅಣ್ಣಾದೊರೈ ಅವರ ಹೆಸರನ್ನು ಪಕ್ಷಕ್ಕೆ ಇಡಲಾಗಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿಕೆ ನೀಡಿದ ಬಳಿಕ ಎಐಎಡಿಎಂಕೆ ನಾಯಕರು ಅಣ್ಣಾಮಲೈ ವಿರುದ್ಧ ತಿರುಗಿಬಿದ್ದಿದ್ದಾರೆ.

ಅಣ್ಣಾಮಲೈ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗಲು ಅನರ್ಹರು. ಅವರು ತಮ್ಮನ್ನು ತಾವು ಬಿಂಬಿಸಿಕೊಳ್ಳಲು ಮಾತ್ರ ದಿವಂಗತ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಜಯಕುಮಾರ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Eknath Shinde : ಸಿಂಹದ ಎದುರು ಕುರಿ-ಮೇಕೆಗಳು ಹೋರಾಡಲು ಸಾಧ್ಯವಿಲ್ಲ; ಶಿಂಧೆ

ಈ ಹಿಂದೆ ಬಿಜೆಪಿ ಜೊತೆ ಎಐಎಡಿಎಂಕೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಆದರೆ ಈ ಬಾರಿ ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದಿದ್ದಾರೆ. ಅಲ್ಲದೆ ಈ ಮೈತ್ರಿ ಸಂಬಂಧ ಮುಂಬರುವ ಲೋಕಸಭಾ ಚುನಾವಣೆ ಸಮಯದಲ್ಲಿ ತಿಳಿಸಲಾಗುವುದು ಎಂದು ಜಯಕುಮಾರ್ ಹೇಳಿದ್ದಾರೆ.

ಎಐಎಡಿಎಂಕೆ 2019ರ ಲೋಕಸಭೆ ಚುನಾವಣೆ ಮತ್ತು 2021ರ ವಿಧಾನಸಭಾ ಚುನಾವಣೆ ಸೇರಿದಂತೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಎಲ್ಲಾ ಚುನಾವಣೆಗಳಲ್ಲಿ ಸೋತಿದೆ. ಜೊತೆಗೆ ಬಿಜೆಪಿಯೇ ಮೈತ್ರಿಯಲ್ಲಿ ಪ್ರಾಬಲ್ಯ ಹೊಂದಿರುವಂತೆ ಜನತೆ ಎದುರು ತೋರಿಸಿಕೊಳ್ಳುತ್ತಿದೆ ಎಂದು ಎಐಎಡಿಎಂಕೆ ನಾಯಕರು ಆರೋಪಿಸಿದ್ದರು.

ಇದನ್ನೂ ಓದಿ: BREAKING: ಕರ್ನಾಟಕಕ್ಕೆ ಮತ್ತೆ ಸೋಲು! ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ CWMA ಆದೇಶ

1956ರಲ್ಲಿ ಮಧುರೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದಿವಂಗತ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಅವರು ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಹೇಳಿದ್ದರು. ಅಣ್ಣಾದೊರೈ ಅವರು ತಮ್ಮ ಹೇಳಿಕೆಯ ನಂತರ ಮಧುರೈನಲ್ಲಿ ಅಡಗಿಕೊಳ್ಳಬೇಕಾಯಿತು ಮತ್ತು ಅವರು ಕ್ಷಮೆಯಾಚಿಸಿದ ನಂತರ ಮಾತ್ರ ಮುಂದೆ ಪ್ರವಾಸ ಮಾಡಲು ಸಾಧ್ಯವಾಯಿತು ಎಂದಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles