Monday, March 27, 2023
spot_img
- Advertisement -spot_img

ಕರ್ನಾಟಕದಲ್ಲಿ ನಡೆಯುವ ಭಾರತ್‌ ಜೋಡೋ ಯಾತ್ರೆಯಲ್ಲಿ ಸೋನಿಯಾ, ಪ್ರಿಯಾಂಕಾ ಭಾಗಿ: ಡಿಕೆಶಿ ಮಾಹಿತಿ

ಬೆಂಗಳೂರು: ರಾಹುಲ್‌ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯಲಿರುವ ಭಾರತ ಐಕ್ಯತಾ (ಭಾರತ್‌ ಜೋಡೋ) ಯಾತ್ರೆಯಲ್ಲಿ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೆವಾಲಾ ಆಗಮಿಸಿ ಭಾರತ ಐಕ್ಯತಾ ಯಾತ್ರೆಯ ಸಿದ್ಧತೆ ಪರಿಶೀಲನೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಯುವಕರು, ಮಹಿಳೆಯರು ರೈತರು ವಿದ್ಯಾರ್ಥಿಗಳು ಬುಡಕಟ್ಟು ಜನರ ಜೊತೆಗೆ ಸಂವಾದ ನಡೆಸಲಿದ್ದಾರೆ ಎಂದರು. ಇನ್ನು ಪ್ರತೀ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾಕಾಂಗ್ರೆಸ್ ಸಮಿತಿ, ಪಕ್ಷದ ಘಟಕಗಳು ಪರಾಜಿತ ಅಭ್ಯರ್ಥಿಗಳು ಜನರನ್ನು ಕರೆ ತಂದು ರಾಹುಲ್‌ ಗಾಂಧಿ ಜೊತೆ ಹೆಜ್ಜೆ ಹಾಕಲು ಅವಕಾಶ ಮಾಡಿಕೊಡಲಾಗುವುದು.ಈ ಯಾತ್ರೆ ಮಾರ್ಗದಲ್ಲಿ ಬರುವ ಅತಿ ದೊಡ್ಡ ನಗರ ಮೈಸೂರಾಗಿದ್ದು, ಮೈಸೂರು ಜನರು ಬೆಳಗ್ಗೆ 7 ಘಂಟೆಗೆ ರಾಹುಲ್ ಗಾಂಧಿ ಜೊತೆಗೆ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದರು. ಮೇಲಾಗಿ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿಯವರು ಮುಂದಾಳತ್ವ ವಹಿಸಬೇಕು ಎಂದು ನಮ್ಮ ರಾಜ್ಯದ ಎಲ್ಲಾ ನಾಯಕರ ಒತ್ತಾಸೆಯಾಗಿದೆ ಆದ್ರೆ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕು ಎಂದರು ಮಾಹಿತಿ ನೀಡಿದ್ರು.

Related Articles

- Advertisement -

Latest Articles