ಬೆಂಗಳೂರು: ತಂದೆ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದು ಖುಷಿಯಾಗಿದೆ ಎಂದು ಡಿಕೆಶಿವಕುಮಾರ್ ಪುತ್ರಿ ಐಶ್ವರ್ಯಾ ಪ್ರತಿಕ್ರಿಯಿಸಿದ್ದಾರೆ.
ತಂದೆಯವರನ್ನು ಸಿಎಂ ಆಗಿ ನೋಡಲು ಇಷ್ಟಪಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಒಂದು ದಿನ ನೋಡುತ್ತೇವೆ ಎಂದರು.ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಜೊತೆ ಭಾರೀ ಪೈಪೋಟಿ ನಡೆಸಿದ ಡಿಕೆ ಶಿವಕುಮಾರ್ ಡಿಸಿಎಂ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
CM ಆಗಿ ಸಿದ್ದರಾಮಯ್ಯ, DCM ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೇ ವೇಳೆ 8 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಿಎಂ ಸಿದ್ದರಾಮಯ್ಯ ಜೊತೆ ಡಿಸಿಎಂ ಆಗಿ ವಿಧಾನಸೌಧಕ್ಕೆ ಬಂದ ಡಿಕೆಶಿ, ವಿಧಾನಸೌಧ ಮೆಟ್ಟಿಲುಗೆ ತಲೆಬಾಗಿ ನಮಿಸಿದ್ರು..
ಕರ್ನಾಟಕ ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು ವಿಧಾನಸೌಧಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ವಿಧಾನಸೌಧದ ಮೆಟ್ಟಿಲಿಗೆ ಶಿರ ಬಾಗಿ ನಮಸ್ಕರಿಸಿ ವಿಧಾನಸೌಧದ ಒಳಗೆ ಹೋದರು.