ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭದ ಹಿಂದಿನ ದಿನ ಅಂದರೆ ಸೆಪ್ಟೆಂಬರ್ 17 ರಂದು ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ (ಎಕ್ಷ್) ಬರೆದುಕೊಂಡಿರುವ ಅವರು, ಇದೇ ಸೆಪ್ಟೆಂಬರ್ 18 ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಪೂರ್ವಭಾವಿಯಾಗಿ ದಿನಾಂಕ 17 ರಂದು ಸಂಜೆ 4.30 ಕ್ಕೆ ಸರ್ವ ಪಕ್ಷಗಳ ನಾಯಕರ ಸಭೆಯನ್ನು ಕರೆಯಲಾಗಿದೆ. ಎಲ್ಲಾ ನಾಯಕರಿಗೂ ಈ ಕುರಿತು ಈ-ಮೇಲ್ ಮೂಲಕ ಮಾಹಿತಿ ನೀಡಿ, ಆಮಂತ್ರಣ ನೀಡಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಸರ್ಕಾರಿ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ; ಪತ್ರಕರ್ತ ಸುಧೀರ್ ಚೌಧರಿ ವಿರುದ್ಧ ಎಫ್‌ಐಆರ್
ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುವಂತೆ ವಿಪಕ್ಷಗಳಿಗೆ ಕರೆ ನೀಡಿದ್ದಾರೆ. ಸೆ.18 ರಿಂದ 22 ವರೆಗೆ 5 ದಿನಗಳ ಕಾಲ ಸಂಸತ್ ನ ವಿಶೇಷ ಅಧಿವೇಶನ ನಡೆಯಲಿದೆ.
ಇಂಡಿಯಾ ಮೈತ್ರಿಕೂಟದಲ್ಲಿರುವ 24 ಪಕ್ಷಗಳು ಸಂಸತ್ ನ ವಿಶೇಷ ಅಧಿವೇಶನದಲ್ಲಿ ಭಾಗಿಯಾಗುವುದಕ್ಕೆ ಒಪ್ಪಿದ್ದು, ಅಧಿವೇಶನದ ಕಾರ್ಯಸೂಚಿ ಇನ್ನಷ್ಟೇ ಬಹಿರಂಗವಾಗಬೇಕಿದೆ.
ಇದನ್ನೂ ಓದಿ : Indian Citizenship : ಪಾಕಿಸ್ತಾನದ 108 ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವ ವಿತರಣೆ
ಕಳೆದ ತಿಂಗಳು ಮುಕ್ತಾಯಗೊಂಡ ಮುಂಗಾರು ಅಧಿವೇಶನ ಹಳೆಯ ಸಂಸತ್ ಭವನದಲ್ಲಿ ನಡೆದಿತ್ತು. ಈ ಅಧಿವೇಶನ ಹಳೆಯ ಮತ್ತು ಹೊಸ ಸಂಸತ್ ಭವನಗಳಲ್ಲಿ ನಡೆಯುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ವರ್ಷಾಂತ್ಯಕ್ಕೆ ಪಂಚರಾಜ್ಯಗಳ ಚುನಾವಣೆಗಳಿಗೆ ತಯಾರಾಗುತ್ತಿರುವ ಪಕ್ಷಗಳಿಗೆ ವಿಶೇಷ ಅಧಿವೇಶನ ಕರೆದಿರುವುದು ಅಚ್ಚರಿ ಮೂಡಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.