Sunday, September 24, 2023
spot_img
- Advertisement -spot_img

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ : ಶಾಸಕಿಗೆ ಹೈಕೋರ್ಟ್ ನೋಟಿಸ್

ಕೋಲಾರ: ನಾಮಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದ ಆರೋಪ ಎದುರಿಸುತ್ತಿರುವ ಶಾಸಕಿ ರೂಪಕಲಾ ಶಶಿಧರ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಅವರು ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಜೆಡಿಎಸ್ ಮುಖಂಡ ಡಾ.ರಮೇಶ್ ಬಾಬು ಹೈಕೋರ್ಟ್‌ಗೆ ದೂರು ನೀಡಿದ್ದರು.

ಈ ದೂರಿನ ಹಿನ್ನೆಲೆ ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನಾಮಪತ್ರ ಸಲ್ಲಿಸುವಾಗ ಚುನಾವಣಾ ಆಯೋಗಕ್ಕೆ ಸುಮಾರು 25ಕ್ಕೂ ಹೆಚ್ಚು ಅಂಶಗಳಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ, ಅವರಿಗೆ ಎರಡು ಕಡೆ ಮತದಾನದ ಹಕ್ಕಿದ್ದು, ಅದನ್ನು ಮರೆಮಾಚಿದ್ದಲ್ಲದೆ, ಬೇತಮಂಗಲದಲ್ಲಿ ಮಾತ್ರ ಮತದಾನದ ಹಕ್ಕು ಇದೆ ಎಂದು ಉಲ್ಲೇಖಿಸಿದ್ದಾರೆ, ವಾಸ್ತವವಾಗಿ ಅಲ್ಲಿ ಶಾಸಕಿ ರೂಪಕಲಾ ಶಶಿಧರ್ ಅವರಿಗೆ ಯಾವುದೇ ಮತದಾನದ ಹಕ್ಕು ಇಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಚಂದ್ರಯಾನ್-3 ಯಶಸ್ಸಿನಲ್ಲಿ ಶಿವಮೊಗ್ಗದ ಮಾಜಿ ಶಾಸಕರ ಪುತ್ರಿ!

ಶೀಘ್ರವೇ ದೂರನ್ನು ಪರಿಶೀಲಿಸಿ ಶಾಸಕಿ ಸ್ಥಾನದಿಂದ ಅನರ್ಹಗೊಳಿಸಿ ಮುಂದಿನ 6 ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಜೆಡಿಎಸ್ ಮುಖಂಡ ಡಾ.ರಮೇಶ್ ಬಾಬು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles