Sunday, September 24, 2023
spot_img
- Advertisement -spot_img

ಭಾರತಕ್ಕೆ ಭೇಟಿ ನೀಡಲಿರುವ ಅಮೇರಿಕಾ ಅಧ್ಯಕ್ಷ

ನವದೆಹಲಿ : ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರು ಸೆಪ್ಟೆಂಬರ್ 7ರಿಂದ ನಾಲ್ಕು ದಿನಗಳ ಕಾಲ ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದಾರೆಂದು ಶ್ವೇತಭವನವು ಪ್ರಕಟಣೆಯಲ್ಲಿ ತಿಳಿಸಿದೆ.

ನಗರದಲ್ಲಿ ನಡೆಯಲಿರುವ ಜಿ-20 ನಾಯಕರ ಶೃಂಗಸಭೆಯಲ್ಲಿ ಬೈಡನ್ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಅವರು G-20 ರಾಷ್ಟ್ರಗಳ ಜಾಗತಿಕ ಸಮಸ್ಯೆಗಳನ್ನು ನಿಭಾಯಿಸಲು ಜಂಟಿ ಪ್ರಯತ್ನಗಳ ಶ್ರೇಣಿಯ ಬಗ್ಗೆ ಚರ್ಚಿಸಲಿದ್ದಾರೆ.

ಇದನ್ನೂ ಓದಿ : ಚಂದ್ರಯಾನದ ಬಗ್ಗೆ ವ್ಯಂಗ್ಯ; ಪ್ರಕಾಶ್‌ ರಾಜ್‌ ಬಂಧನಕ್ಕೆ ರಾಜ್ಯಪಾಲರಿಗೆ ದೂರು

ಶುದ್ಧ ಇಂಧನ ಪರಿವರ್ತನೆ ಮತ್ತು ಹವಾಮಾನ ಬದಲಾವಣೆಯನ್ನು ಎದುರಿಸುವುದು, ಉಕ್ರೇನ್‌ನಲ್ಲಿ ರಷ್ಯಾದ ಪುಟಿನ್ ನಡೆಸುತ್ತಿರುವ ಯುದ್ಧದ ಆರ್ಥಿಕ, ಮತ್ತು ಸಾಮಾಜಿಕ ಪರಿಣಾಮಗಳನ್ನು ಕಡಿಮೆಗೊಳಿಸುವ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಅಲ್ಲದೆ ಬಹುಪಕ್ಷೀಯ ಸಂಬಂಧ ವೃದ್ಧಿಯ ಜೊತೆಗೆ ಬ್ಯಾಂಕುಗಳ ಸಾಮರ್ಥ್ಯವನ್ನು ಬಲಪಡಿಸುವುದು ಸೇರಿದಂತೆ ಜಾಗತಿಕ ಸವಾಲುಗಳನ್ನು ಎದುರಿಸುವುದು, ಬಡತನದ ವಿರುದ್ಧ ಸಮರ್ಥವಾಗಿ ಹೋರಾಡಲು ವಿಶ್ವಬ್ಯಾಂಕ್ ಶಕ್ತಿಯನ್ನು ಹೆಚ್ಚಿಸುವುದರ ಬಗ್ಗೆಯೂ ಜಾಗತಿಕ ನಾಯಕರೊಂದಿಗೆ ಚರ್ಚೆ ಮಾಡಲಿದ್ದಾರೆ ಎಂದು ಶ್ವೇತಭವನವು ತಿಳಿಸಿದೆ.

ಜಾಗತಿಕ ನಾಯಕರ ಮಹತ್ವದ ಸಮಾವೇಶದ ಹಿನ್ನೆಲೆಯಲ್ಲಿ ಸೆ 8ರಿಂದ 10ರ ವರೆಗೆ ದೆಹಲಿಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು, ಬ್ಯಾಂಕುಗಳು, ಮಾರುಕಟ್ಟೆಗಳು ಸೇರಿದಂತೆ ಶಾಲಾ ಕಾಲೇಜುಗಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles