Monday, December 11, 2023
spot_img
- Advertisement -spot_img

ತೆಲಂಗಾಣ ಚುನಾವಣೆ 2023: ನ.17ಕ್ಕೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ!

ಹೈದರಾಬಾದ್: ನ.17 ರಂದು ತೆಲಂಗಾಣಕ್ಕೆ ಭೇಟಿ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ. ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಶಾ ಅವರು ನಲ್ಗೊಂಡ, ವಾರಂಗಲ್, ಗದ್ವಾಲ್ ಮತ್ತು ರಾಜೇಂದ್ರನಗರದಲ್ಲಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ.

ನ.30ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣದಲ್ಲಿ ಹಿಂದುಳಿದ ವರ್ಗ (ಬಿಸಿ) ನಾಯಕನನ್ನು ಮುಖ್ಯಮಂತ್ರಿ ಮಾಡಲಾಗುವುದು ಎಂದು ಮೊದಲು ಘೋಷಿಸಿದ್ದರು. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳುವುದರೊಂದಿಗೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಪ್ರಮುಖ ನಾಯಕರನ್ನು ಪ್ರಚಾರಕ್ಕಾಗಿ ಕಣಕ್ಕಿಳಿಸುವ ಮೂಲಕ ಬಿಜೆಪಿ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಿದೆ.

ಇದನ್ನೂ ಓದಿ: ಜ.22 ರಾಮ ಮಂದಿರ ಉದ್ಘಾಟನೆ: ದೇಶಾದ್ಯಂತ 10 ಕೋಟಿ ಕುಟುಂಬಕ್ಕೆ ಆಹ್ವಾನ!

ಈ ನಡುವೆ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯಾಧ್ಯಕ್ಷ ಜಿ ಕೃಷ್ಣ ರೆಡ್ಡಿ ಹೇಳಿದ್ದಾರೆ. ಬಿಆರ್‌ಎಸ್ ಆಡಳಿತದಿಂದ ತೆಲಂಗಾಣ ಮಂದಿ ಬೇಸತ್ತು ಹೋಗಿದ್ದಾರೆ. ಬದಲಾವಣೆ ಬಯಸಿರುವ ಅವರು ಬಿಜೆಪಿ ಕಡೆ ಒಲವು ಹೊಂದಿದ್ದಾರೆ ಎಂದರು.

ಇದನ್ನೂ ಓದಿ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಬಿಗ್‌ ರಿಲೀಫ್ ಕೊಟ್ಟ ಲೋಕಾಯುಕ್ತ ಕೋರ್ಟ್‌

ಭಾರತೀಯ ಜನತಾ ಪಕ್ಷವು ಸಂಪೂರ್ಣ ಬಹುಮತವನ್ನು ಪಡೆಯುತ್ತದೆ. ಈ ಉದ್ದೇಶದಿಂದಲೇ ನಾವು ಕೆಲಸ ಮಾಡುತ್ತಿದ್ದೇವೆ. ತೆಲಂಗಾಣ ಜನರು ಬಿಆರ್‌ಎಸ್ ಅಥವಾ ಕಾಂಗ್ರೆಸ್‌ನಿಂದ ಬದಲಾವಣೆಯನ್ನು ಬಯಸುತ್ತಾರೆ ಏಕೆಂದರೆ ಹಳೆಯ ಪಕ್ಷ ಗೆದ್ದರೂ ಅದರ ಕೆಲವು ಶಾಸಕರು ಬಿಆರ್‌ಎಸ್‌ಗೆ ಸೇರುತ್ತಾರೆ ಎಂಬ ಅಂಶ ಜನರಿಗೆ ಗೊತ್ತಾಗಿದೆ ಎಂದಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles