ಕೊಲ್ಕತ್ತಾ : ಹಿಂದಿ ಚಿತ್ರರಂಗಕ್ಕೆ ಅಮಿತಾಭ್ ಅವರ ಕಲಾಸೇವೆಯ ಕೊಡುಗೆ ಅಪಾರ. ಪಾತ್ರಗಳೇ ತಾವಾಗಿ ಜೀವ ತುಂಬಿ ನಟಿಸುವ ಮಹಾನ್ ನಟನಿಗೆ ಭಾರತ ರತ್ನ ಪ್ರಶಸ್ತಿ ಕೊಡಬೇಕು ಎಂದು ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.
ಕೊಲ್ಕತ್ತಾ ಚಿತ್ರೋತ್ಸವದಲ್ಲಿ ಮಾತನಾಡಿ, ಬಾಲಿವುಡ್‌ನಲ್ಲಿ ಹಲವಾರು ವರ್ಷಗಳಿಂದ ಅಮಿತಾಭ್ ಬಚ್ಚನ್ ಸಾಕಷ್ಟು ಸಿನಿಮಾಗಳ ಮನರಂಜನೆ ನೀಡುತ್ತಲೇ ಬಂದಿದ್ದಾರೆ. ಹಿರಿಯ ನಟ ಬಿಗ್ ಬಿ ಕಲಾಸೇವೆಯನ್ನ ಗುರುತಿಸಿ ಅವರಿಗೆ `ಭಾರತ ರತ್ನ ಪ್ರಶಸ್ತಿ’ನೀಡಿ ಎಂದಿದ್ದಾರೆ. ಭಾರತ ರತ್ನ ಪ್ರಶಸ್ತಿ ಕೊಡಬೇಕು ಎಂಬುದು ಕೆಲವು ವರ್ಷಗಳಿಂದ ಕೇಳಿ ಬರುತ್ತಿರುವ ಬಹುದೊಡ್ಡ ಬೇಡಿಕೆ. ಇದೀಗ ಮತ್ತೆ ಈ ವಿಷಯ ಮುನ್ನಲೆಗೆ ಬಂದಿದೆ. ಬಿಗ್ ಬಿ ಕಲಾಸೇವೆಯನ್ನ ಗುರುತಿಸಿ, ಭಾರತ ರತ್ನ ಪ್ರಶಸ್ತಿ ಕೊಡಿ ಎಂದರು.
ಈ ವೇಳೆ ಅಮಿತಾಭ್ ಬಚ್ಚನ್ ಮಾತನಾಡಿ, ಇಷ್ಟು ವರ್ಷಗಳಲ್ಲಿ ಚಿತ್ರರಂಗದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಪೌರಾಣಿಕ ಚಿತ್ರದಿಂದ ಹಿಡಿದು ಐತಿಹಾಸಿಕ ಚಿತ್ರದವೆರೆಗೂ ಚಿತ್ರರಂಗದಲ್ಲಿ ಹಲವು ಶೈಲಿಯ ಸಿನಿಮಾಗಳು ಬಂದು ಹೋಗಿದೆ. ಈ ಬದಲಾವಣೆ ಪ್ರೇಕ್ಷಕರನ್ನು ಸೆಳೆಯುವಂತೆ ಮಾಡಿದೆ. ಈ ಬದಲಾವಣೆ ಸಿನಿಪ್ರೇಕ್ಷಕರನ್ನ ರಾಜಕೀಯ ಮತ್ತು ಸಾಮಾಜಿಕ ಕಾಳಜಿಯನ್ನು ಪ್ರತಿಬಿಂಬಿಸುವಂತೆ ಮಾಡಿದೆ ಎಂದು ಮಾತನಾಡಿದ್ದಾರೆ.
ಅಂದಹಾಗೆ ಅಮಿತಾಭ್ ಬಚ್ಚನ್ ಹಿಂದಿ ಚಿತ್ರರಂಗದ ಪ್ರಖ್ಯಾತ ನಟ, ನಿರ್ಮಾಪಕ, ಕಿರುತೆರೆ ನಿರೂಪಕ ಮತ್ತು ಮಾಜಿ ರಾಜಕಾರಣಿ. ಜಂಜೀರ್, ದೀವಾರ್, ಶೋಲೆ ಮುಂತಾದ ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳ ಮೂಲಕ ಭಾರತದ ಮೊದಲ ಆ್ಯಂಗ್ರಿ ಯಂಗ್ ಮ್ಯಾನ್ ಹೀರೋ ಆಗಿ ಗುರುತಿಸಿಕೊಂಡರು. ಸುಮಾರು 15 ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಪಡೆದಿರುವ ಅಮಿತಾಭ್ ಹಿಂದಿಯಲ್ಲಿ ಕೌನ್ ಬನೇಗಾ ಕರೋಡಪತಿ ಎಂಬ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರೂಪಿಸಿದ್ದಾರೆ.
ಭಾರತ ಸರ್ಕಾರ ನೀಡುವ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಫ್ರಾನ್ಸ್ ಸರ್ಕಾರ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಒಟ್ಟಿನಲ್ಲಿ ಹಿರಿಯ ನಟ ನಿಗೆ ಭಾರತ ರತ್ನ ಪ್ರಶಸ್ತಿ ಕೊಡಬೇಕು ಎಂಬ ಒಕ್ಕೋರಲಿನ ಕೂಗು ಕೇಳಿ ಬರುತ್ತಿದೆ. ಅಭಿಮಾನಿಗಳು ಸಿನೆಮಾ ಗಣ್ಯರು ಕೂಡಾ ಈ ಬಗ್ಗೆ ಚರ್ಚಿಸುತ್ತಿದ್ದಾರೆ.