Monday, March 27, 2023
spot_img
- Advertisement -spot_img

ಕೇಂದ್ರ ಗೃಹ ಸಚಿವ ಅಮಿತ್‌ ಶಾ ದಕ್ಷಿಣ ಕನ್ನಡ ಜಿಲ್ಲೆಗೆ ಫೆ.11ರಂದು ಭೇಟಿ

ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ದಕ್ಷಿಣ ಕನ್ನಡ ಜಿಲ್ಲೆಗೆ ಫೆ.11ರಂದು ಭೇಟಿ ನೀಡಲಿದ್ದು, ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ಸಮಾವೇಶ ನಡೆಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ, ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಿಂದ ಸುಮಾರು 1 ಲಕ್ಷ ಜನರು ಸಮಾವೇಶದಲ್ಲಿ ಭಾಗವಹಿಸುವರು. ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ಬರುತ್ತಿದ್ದು, ಕ್ಯಾಂಪ್ಕೋ ನೇತೃತ್ವದಲ್ಲಿ ಬೃಹತ್‌ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ 3 ಗಂಟೆಗೆ ಸಮಾವೇಶ ನಡೆಯಲಿದೆ.

ಅಮಿತ್‌ ಶಾ ಅವರು ಅಂದು ಕ್ಯಾಂಪ್ಕೋ ಚಾಕಲೇಟ್‌ ಫ್ಯಾಕ್ಟರಿಗೆ ಭೇಟಿ ನೀಡಲಿದ್ದಾರೆ. ಉಳಿದಂತೆ ಅವರ ಬೇರೆ ಕಾರ್ಯಕ್ರಮಗಳ ಬಗ್ಗೆ ಅಂತಿಮ ವಿವರ ಇನ್ನಷ್ಟೇ ಸಿಗಬೇಕಿದೆ ಎಂದರು.

ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ ಮಾತನಾಡಿ, ಅಂತಿಮ ಹಂತದ ಬದಲಾವಣೆಯಿದ್ದರೆ ಕೇಂದ್ರ ಗೃಹ ಸಚಿವಾಲಯದಿಂದ ಪರಿಷ್ಕೃತ ಪ್ರವಾಸ ಪಟ್ಟಿ ಬರಬಹುದು ಎಂದು ತಿಳಿಸಿದ್ದಾರೆ. ಅಮಿತ್‌ ಶಾ ಕಾರ್ಯಕ್ರಮಕ್ಕೆ ರೈತರು ಮತ್ತು ಕಾರ್ಯಕರ್ತರನ್ನು ಸೇರಿಸುವ ನಿಟ್ಟಿನಲ್ಲಿ ಪ್ರತೀ ಗ್ರಾಮಮಟ್ಟದಲ್ಲೂಅಭಿಯಾನ ನಡೆಯಲಿದೆ ಎಂದರು.

Related Articles

- Advertisement -

Latest Articles