ಬೆಂಗಳೂರು : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ನಾಳೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಮಾರ್ಚ್ 23ರ ರಾತ್ರಿ 8 ಗಂಟೆಗೆ ನವದೆಹಲಿ ವಿಮಾನ ನಿಲ್ದಾಣದಿಂದ ಪ್ರಯಾಣಿಸಲಿರುವ ಅಮಿತ್ ಶಾ, ರಾತ್ರಿ 10.40 ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 24ರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೂ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಕೊಮ್ಮಘಟ್ಟ ಕಾರ್ಯಕ್ರಮ ಮುಗಿಸಿ ದೆಹಲಿಗೆ ವಾಪಸ್ ಆಗಲಿದ್ದಾರೆ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿಯವರು 25ರಂದು ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿ ಸಂಶೋಧನಾ ಸಂಸ್ಥೆ ಉದ್ಘಾಟನೆ ಮಾಡಲಿದ್ದಾರೆ. ನಂತರ ಬೆಂಗಳೂರಿಗೆ ಆಗಮಿಸಿ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ನಂತರ ಮೋದಿ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ವಿಜಯ ಸಂಕಲ್ಪ’ ಯಾತ್ರೆಯ ಸಮಾರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.