Wednesday, May 31, 2023
spot_img
- Advertisement -spot_img

ಜೆಡಿಎಸ್​ಗೆ ಮತ ಹಾಕಿದರೆ ಅದು ಕಾಂಗ್ರೆಸ್​ಗೆ ಮತ ಹಾಕಿದಂತೆ : ಕೇಂದ್ರ ಗೃಹಸಚಿವ ಅಮಿತ್ ಶಾ

ಬಳ್ಳಾರಿ: ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳು ಪರಿವಾರವಾದಿ ಪಕ್ಷಗಳಾಗಿವೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದರು. ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ, ಜೆಡಿಎಸ್​ಗೆ ಮತ ಹಾಕಿದರೆ ಅದು ಕಾಂಗ್ರೆಸ್​ಗೆ ಮತ ಹಾಕಿದಂತೆ ಎಂದರು.

ಈ ಬಾರಿ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನೂ 2 ಗಂಟೆ ತಡವಾಗಿ ಬಂದಿರುವುದಕ್ಕೆ ಕ್ಷಮೆ ಕೋರುತ್ತೇನೆ. ನಾನು ಸಂಡೂರು ಭೂಮಿಗೆ ಬಂದಿದ್ದೇನೆ.

ಸಂಡೂರಿನ ಭೂಮಿಯ ಕುಮಾರಸ್ವಾಮಿಗೆ ನಮಸ್ಕರಿಸುವೆ, ವೀರ ಆಂಜನೇಯ ಅಂಜನಾದ್ರಿ ಭೂಮಿ, ಹಕ್ಕಬುಕ್ಕ ಭೂಮಿ, ಶ್ರೀಕೃಷ್ಣ ದೇವರಾಯ ಭೂಮಿ ಇದಾಗಿದೆ ಎಂದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ ಪಿಎಫ್​ಐ ಕಾರ್ಯಕರ್ತರ ಮೇಲಿದ್ದ ಪ್ರಕರಣಗಳನ್ನು ವಾಪಸ್ ಪಡೆದುಕೊಂಡಿದ್ದರು. ಆದರೆ ಮೋದಿ ಈ ಸಂಘಟನೆಯನ್ನೇ ಬ್ಯಾನ್ ಮಾಡಿದ್ದಾರೆ ಎಂದರು.

ಕಳೆದ ಬಾರಿ ಭೇಟಿ ನೀಡಿದ್ದಾಗ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬೆಳಗಾವಿ ಪ್ರಮುಖ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ಭಿನ್ನಾಭಿಪ್ರಾಯ, ಅಸಮಾಧಾನ ಬಿಟ್ಟು ಕೆಲಸ ಮಾಡಿ. ಯಾವುದೇ ಗುಂಪುಗಾರಿಕೆ, ವ್ಯಕ್ತ ಪ್ರತಿಷ್ಠೆಗೆ ಅವಕಾಶ ಇಲ್ಲ ಎಂದು ಅಮಿತ್​ ಶಾ ಖಡಕ್​ ವಾರ್ನಿಂಗ್ ನೀಡಿದ್ದರು.

ಸಮಾವೇಶದಲ್ಲಿ ಬಳ್ಳಾರಿ ಜಿಲ್ಲಾ ಬಿಜೆಪಿ ಘಟಕದಿಂದ ಅಮಿತ್ ಶಾಗೆ ಸನ್ಮಾನ ಮಾಡಲಾಯಿತು. ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಬೆಳ್ಳಿ ಗದೆ ನೀಡಿ, ಕುಮಾರಸ್ವಾಮಿ ದೇಗುಲದ ಭಾವಚಿತ್ರವನ್ನು ಕಾಣಿಕೆಯಾಗಿ ನೀಡಲಾಯಿತು.

Related Articles

- Advertisement -

Latest Articles