Wednesday, May 31, 2023
spot_img
- Advertisement -spot_img

ಡ್ರಗ್ಸ್ ಮುಕ್ತ ಮಾಡೋದು ಎಲ್ಲ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಬೇಕು

ಬೆಂಗಳೂರು: ಡ್ರಗ್ಸ್ ಮುಕ್ತ ಮಾಡೋದು ಎಲ್ಲ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಬೇಕು ಎಂದು  ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತು ದಕ್ಷಿಣದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.  ಶಾಲಾ – ಕಾಲೇಜು ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಡ್ರಗ್ಸ್ ಮಾರಾಟವಾಗುತ್ತಿದ್ದು, ಇದರ ವಿರುದ್ಧ ರಾಜ್ಯಗಳು ಸಮರ ಸಾರಬೇಕು ಎಂದರು. ಡ್ರಗ್ಸ್ ಮುಕ್ತಕ್ಕೆ  ಎಲ್ಲ ಇಲಾಖೆಗಳೂ ಇದಕ್ಕೆ ಕೈ ಜೋಡಿಸಬೇಕು. ಮಾದಕ ವ್ಯಸನಿಗಳಿಗೆ ಪುನರ್ವಸತಿ ಕಲ್ಪಿಸೋದು, ಡ್ರಗ್ಸ್ ನಾಶ ಮಾಡೋದು ನಮ್ಮೆಲ್ಲರ ಗುರಿಯಾಗಬೇಕು ಎಂದು ತಿಳಿಸಿದರು. 

ದೇಶದಲ್ಲಿ ಡ್ರಗ್ಸ್ ನಿರ್ಮೂಲನೆ ಮಾಡಲು ಮೋದಿ ನೇತೃತ್ವದ ಸರ್ಕಾರ ಸಮರ ಸಾರಿದೆ. ಜನರಿಗೆ ಡ್ರಗ್ಸ್ ಮುಕ್ತ ರಾಜ್ಯ, ದೇಶ ಮಾಡೋದು ಈ ಅಭಿಯಾನದ ಉದ್ದೇಶ ಸಹ ಆಗಿದೆ. ಡ್ರಗ್ಸ್ ಮುಕ್ತ ದೇಶ ಹಾಗೂ 5 ಟ್ರೆಲಿಯನ್ ಆರ್ಥಿಕ ವ್ಯವಸ್ಥೆ ನಿರ್ಮಾಣ ಮಾಡುವ ಗುರಿಯನ್ನಿಟ್ಟುಕೊಂಡು ಮೋದಿ ಸರ್ಕಾರ ಕೆಲಸ ಮಾಡುತ್ತಿದೆ. ಪ್ರತಿ ಮನೆ ಮನೆಯಲ್ಲೂ ಡ್ರಗ್ಸ್ ವಿರುದ್ಧ ಅಭಿಯಾನ ಶುರುವಾಗಬೇಕು ಎಂದು ಕರೆ ನೀಡಿದರು.

Related Articles

- Advertisement -

Latest Articles