ಬೆಂಗಳೂರು: ಯಡಿಯೂರಪ್ಪ, ಅಮಿತ್ ಶಾ ಭೇಟಿಯಾದ್ರೆ ರಾಜಕೀಯದ ವಿಚಾರ ಅಷ್ಟೇ ಚರ್ಚಿಸ್ತಾರೆ, ಬಿಟ್ಟರೆ ಬೇರೇನೂ ಚರ್ಚೆ ನಡೆಯೋದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಚುನಾವಣೆ ಎದುರಿಸಬೇಕಿದೆ, ಅದಕ್ಕಾಗಿ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್, ಯಡಿಯೂರಪ್ಪ ಎಲ್ಲ ನಾಯಕರೂ ಸೇರಿ ಸುದೀರ್ಘ ಸಮಾಲೋಚನೆ ನಡೆಸಿದರು ಎಂದರು.
ಬಿಜೆಪಿ ಬಹುಮತದಿಂದ ಸರ್ಕಾರ ರಚಿಸಬೇಕು , ಈ ಬಾರಿ ಅಧಿಕಾರಕ್ಕೆ ತರಲೇಬೇಕೆಂದು ಎಂದು ಚರ್ಚೆ ನಡೆಯಿತು ಎಂದು ತಿಳಿಸಿದ್ದಾರೆ. ಅಮಿತ್ ಶಾ ನನ್ನನ್ನು ಬಹಳ ಪ್ರೀತಿಯಿಂದ ಮಾತನಾಡಿಸಿದರು. ಇದರಿಂದ ನನಗೆ ಆನೆ ಬಲ ಬಂದಂತೆ ಆಗಿದೆ. ವರುಣಾದಿಂದ ಸ್ಪರ್ಧೆ ಮಾಡುವ ಚಿಂತನೆ ಇಲ್ಲ. ಶಿಕಾರಿಪುರ ಕ್ಷೇತ್ರದ ಜನತೆ, ಮತದಾರರ ಅಭಿಪ್ರಾಯ ಮೇರೆಗೆ ಅಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.
ಇನ್ನೂ ಯಡಿಯೂರಪ್ಪ ರಾಜೀನಾಮೆ ಬಳಿಕ ಸೈಡ್ ಲೈನ್ ಆಗಿದ್ದಾರೆ ಎಂಬ ಸುದ್ದಿ ಕೇಳಿ ಬರ್ತಿದೆ ಆದರೆ ಅದು ತಪ್ಪು ಕಲ್ಪನೆ, ಪಕ್ಷದಲ್ಲಿ ಅವರನ್ನು ಕಡೆಗಣಿಸಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು. ಅಂದಹಾಗೆ ಒಂದು ದಿನದ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಅಮಿತ್ ಶಾ, ಬೆಂಗಳೂರಿನಲ್ಲಿ ಇಂದು ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಪ್ರಾದೇಶಿಕ ಸಮ್ಮೇಳನ, ಮಧ್ಯಾಹ್ನ 2ಕ್ಕೆ ಕೊಮ್ಮಘಟ್ಟದಲ್ಲಿ ನಡೆಯುವ ಎರಡನೇ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3.30ಕ್ಕೆ ದೆಹಲಿಗೆ ವಾಪಸ್ ತೆರಳಲಿದ್ದಾರೆ